News Karnataka Kannada
Tuesday, April 30 2024
ದೇಶ

ದೇಶದಲ್ಲಿ ಶೇ 50ರಷ್ಟು ಜನರು ಸಂಪೂರ್ಣ ಲಸಿಕೆ ಪಡೆದಿದ್ದಾರೆ

Vaccine 17072021
Photo Credit :

ನವದೆಹಲಿ; ಭಾರತದಲ್ಲಿ ಶನಿವಾರ 1.03 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಈಗ ದೇಶದ ಅರ್ಹ ಜನಸಂಖ್ಯೆಯ ಅರ್ಧದಷ್ಟು ಜನರು ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ. ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಬಳಕೆಯಾಗದ 21.38 ಕೋಟಿ ಡೋಸ್ ಲಸಿಕೆ ಸಂಗ್ರಹವಿದೆ.

ಒಟ್ಟಾರೆಯಾಗಿ ಭಾರತದಲ್ಲಿ ಶೇ 85ರಷ್ಟು ಅರ್ಹ ವಯಸ್ಕರು ಮೊದಲ ಡೋಸ್ ಲಸಿಕೆಯನ್ನು ಪಡೆದಿದ್ದಾರೆ. ಶೇ 50.35ರಷ್ಟು ಜನರು ಸಂಪೂರ್ಣವಾಗಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಹೊಸ ಕೋವಿಡ್ ರೂಪಾಂತರಿ ಓಮ್ರಿಕಾನ್ ಪ್ರಕರಣ ಪತ್ತೆಯಾಗಿದೆ.ಬಳಿಕ ವಿವಿಧ ರಾಜ್ಯಗಳು ಲಸಿಕಾ ಅಭಿಯಾನಕ್ಕೆ ಚುರುಕು ಮುಟ್ಟಿಸಿವೆ. ಶನಿವಾರ ಬಿಹಾರದಲ್ಲಿ 15.33 ಲಕ್ಷ, ತಮಿಳುನಾಡಿನಲ್ಲಿ 14.84 ಲಕ್ಷ, ರಾಜಸ್ಥಾನದಲ್ಲಿ10.8 ಲಕ್ಷ ಹಾಗೂ ಉತ್ತರ ಪ್ರದೇಶದಲ್ಲಿ 10.24 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ.

ಶನಿವಾರದ ವರದಿಯಂತೆ ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 99,974 ಆಗಿದೆ. 2020ರ ಮಾರ್ಚ್ ತಿಂಗಳ ಬಳಿಕ ಇದು ಅತಿ ಕಡಿಮೆ ಸಕ್ರಿಯ ಪ್ರಕರಣವಾಗಿದೆ. ದಿನದ ಪಾಸಿಟಿವಿಟಿ ದರ ಕಳೆದ 61 ದಿನಗಳಿಂದ ಶೇ 2ಕ್ಕಿಂತ ಕಡಿಮೆಯಾಗಿದೆ. ಕಳೆದ 20 ದಿನಗಳಿಂದ ಶೇ 1ಕ್ಕಿಂತ ಕಡಿಮೆ ಇದೆ.

30 ಜಿಲ್ಲೆಗಳು ಕೇಂದ್ರ ಆರೋಗ್ಯ ಸಚಿವಾಲಯ 30 ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ದೇಶದ 5 ರಾಜ್ಯ, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರಕ್ಕೆ ಈ ಕುರಿತು ಸೂಚನೆಗಳನ್ನು ಸಹ ಸಚಿವಾಲಯ ನೀಡಿದೆ.

ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೇರಳ, ಕರ್ನಾಟಕ, ತಮಿಳುನಾಡು, ಓಡಿಶಾ, ಮಿಜೋರಾಂ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಪತ್ರವನ್ನು ಬರೆದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು