ದೇಶ

ದೇಶದಲ್ಲಿ ಸಂವಹನ ಕ್ರಾಂತಿ ಸೃಷ್ಟಿಗೆ ಯೋಜನೆ ; ರಾಜೀವ್‌ ಚಂದ್ರಶೇಖರ್‌

ಬೆಂಗಳೂರು, ;ಬರುವ ದಿನಗಳಲ್ಲಿ ದೇಶದ ಪ್ರತಿಯೊಂದು ಹಳ್ಳಿಗಳಿಗೂ ಇಂಟರ್ನೆಟ್‌ ಸೌಲಭ್ಯವನ್ನು ತಲುಪಿಸುವುದು ತಮ್ಮ ಮುಂದಿನ ಗುರಿಯಾಗಿದೆ ಎಂದು ಕೇಂದ್ರ ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ದೇಶದ 5 ಸಾವಿರ ಗ್ರಾಮಗಳಿಗೆ ಇಂಟರ್‍ನೆಟ್ ಸೌಲಭ್ಯವನ್ನು ಕಲ್ಪಿಸಲು ಕೇಬಲ್ ಅಳವಡಿಸುವ ಕಾರ್ಯ ಆರಂಭವಾಗಿದೆ. ಪ್ರತಿಯೊಂದು ಗ್ರಾಮಕ್ಕೂ ಇಂಟರ್‍ನೆಟ್ ಸೌಲಭ್ಯ ಒದಗಿಸಿ ಸಂಹವನ ಕ್ರಾಂತಿಯನ್ನು ಸೃಷ್ಟಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.
ದೇಶದಲ್ಲಿರುವ ಪ್ರತಿಯೊಂದು ಗ್ರಾಮಗಳಿಗೂ ಮೂಲಭೂತ ಸೌಕರ್ಯ, ವಿದ್ಯುತ್, ಇಂಟರ್‍ನೆಟ್ ಕಲ್ಪಿಸಿಕೊಡುವುದು ಪ್ರಧಾನಿಗಳ ಕನಸಾಗಿದೆ. ಅದನ್ನು ನನಸು ಮಾಡುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು. ಹುಬ್ಬಳ್ಳಿ- ಧಾರವಾಡದಲ್ಲಿ ಆರಂಭವಾದ ಯಾತ್ರೆಯಲ್ಲಿ ನಾನು 700 ಕಿಮೀನಷ್ಟು ಕ್ರಮಿಸಿದ್ದೇನೆ. ಇಂದು ಜನಾಶೀರ್ವಾದ ಯಾತ್ರೆಯ ನಾಲ್ಕನೇ ದಿನ. ನೆನ್ನೆ ರಾತ್ರಿಯೇ ನಾನು ನಮ್ಮ ಬೆಂಗಳೂರಿಗೆ ಬಂದೆ ಎಂದು ಹೇಳಿದರು.
ಕಳೆದ ಜುಲೈನಲ್ಲಿ ನಾನು ದೆಹಲಿಗೆ ಹೋಗಿದ್ದೆ. ಅಂದು ಸಚಿವನಾಗುತ್ತೇನೆ ಅಂದುಕೊಂಡಿರಲಿಲ್ಲ. ನರೇಂದ್ರ ಮೋದಿ ಅವರ ಟೀಂನಲ್ಲಿ ಸ್ಥಾನ ಸಿಕ್ಕಿರುವುದು ನಿಜಕ್ಕೂ ಗೌರವದ ವಿಚಾರ ಎಂದು ಸಂತಸ ವ್ಯಕ್ತಪಡಿಸಿದರು. ಹೊಸ ಭಾರತದ ಕಲ್ಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಗೂಡಿರುವುದು ಹೆಮ್ಮೆಯ ವಿಚಾರ. ಕೌಶಲ್ಯಾಭಿವೃದ್ದಿ, ಐಟಿ, ಎಲೆಕ್ಟ್ರಾನಿಕ್ ಖಾತೆ ನಮ್ಮ ಕರ್ನಾಟಕಕ್ಕೆ ಬಹಳ ಮುಖ್ಯ ಎಂದರು.

 

Indresh KC

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago