ನವದೆಹಲಿ : ದೇಶದಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 40,120 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 585 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,21,17,826ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,30,254ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,85,227ಕ್ಕೆ ತಲುಪಿದೆ