ದೇಶದಲ್ಲಿ 11,271 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಹೊಸದಿಲ್ಲಿ:ಈ ಅವಧಿಯಲ್ಲಿ 285 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದ ದೇಶದಲ್ಲಿ ಇದುವರೆಗೆ ಸಾವನ್ನಪ್ಪಿದ ಸೋಂಕಿತರ ಸಂಖ್ಯೆ 4,63,530 ಕ್ಕೆ ಏರಿಕೆಯಾಗಿದೆ.

ಕೇರಳ ರಾಜ್ಯವೊಂದರಲ್ಲೇ 6,468 ಪ್ರಕರಣಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 999 ಪ್ರಕರಣಗಳು, ಪಶ್ಚಿಮ ಬಂಗಾಳದಲ್ಲಿ 872 ಪ್ರಕರಣಗಳು, ತಮಿಳುನಾಡು ರಾಜ್ಯದಲ್ಲಿ 809 ಪ್ರಕರಣಗಳು ಮತ್ತು ಮಿಜೋರಾಂನಲ್ಲಿ 387 ಕೋವಿಡ್ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 11,271 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಶನಿವಾರ ಪತ್ತೆಯಾದ ಪ್ರಕರಣಗಳಿಗಿಂತ ಶೇ 4.9 ರಷ್ಟು ಕಡಿಮೆ ಪ್ರಕರಣಗಳು ಪತ್ತೆಯಾಗಿದೆ. ಇದರಿಂದ ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,44,37,307 ಕ್ಕೆ ಏರಿಕೆಯಾಗಿದೆ.

 

ಈ ಐದು ರಾಜ್ಯಗಳಲ್ಲೇ ದೇಶದ ಶೇ.84.6 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇರಳ ರಾಜ್ಯವೊಂದರಲ್ಲೇ ಶೇ. 57.39 ರಷ್ಟು ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 11,376 ರೋಗಿಗಳು ಚೇತರಿಸಿಕೊಂಡಿದ್ದಾರೆ, ಇದು ದೇಶಾದ್ಯಂತ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,38,37,859 ಕ್ಕೆ ತಲುಪಿದೆ. ಭಾರತದ ಚೇತರಿಕೆಯ ಪ್ರಮಾಣವು ಈಗ 98.26% ರಷ್ಟಿದೆ.

Swathi MG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

59 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago