ನವದೆಹಲಿ: ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26,115 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 252 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟು ಕೇಸುಗಳ ಸಂಖ್ಯೆ 3,35,04, 534ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,45,385ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3 ಲಕ್ಷದ 09 ಸಾವಿರದ 575ಕ್ಕೆ ತಲುಪಿದ್ದು, ಈ ನಡುವೆ ಕಳೆದ 24 ಗಂಟೆಗಳಲ್ಲಿ 34 ಸಾವಿರದ 469 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 27 ಲಕ್ಷದ 49 ಸಾವಿರದ 574ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ನಿನ್ನೆ ಒಂದೇ 14 ಲಕ್ಷದ 13 ಸಾವಿರದ 951 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ನಿನ್ನೆಯವರೆಗೆ 55,50,35,717 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.