ನವದೆಹಲಿ: ಕಳೆದ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 28,591 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 338 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,32,36,921ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,42,655ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,84,921ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 34,848 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,24,09,345ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 15,30,125 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 54,18,05,829 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.