ನವದೆಹಲಿ: ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 30,773 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 309 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,34,48,163ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,44,838ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,32,158ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 38,945 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,26,71,167ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 15,59,895 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 55,23,40,168 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.