ದೇಶ

ದೇಶದಲ್ಲಿ 40 ಕೋಟಿ ಜನರಿಗೆ ಕೋವಿಡ್‌ ಪರೀಕ್ಷೆ ; ಐಸಿಎಂಆರ್‌

ನವದೆಹಲಿ: ದೇಶದಲ್ಲಿ ಇಲ್ಲಿಯವರೆಗೂ 40 ಕೋಟಿ ಜನರಿಗೆ ಕೋವಿಡ್‌–19ರ ಪರೀಕ್ಷೆ ನಡೆಸುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಲಾಗಿದೆ. ಜೂನ್‌ ತಿಂಗಳಲ್ಲಿ ನಿತ್ಯ ಸರಾಸರಿ 18 ಲಕ್ಷ ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್‌) ಶನಿವಾರ ಮಾಹಿತಿ ನೀಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಸ್ಥೆ, ದೇಶದಾದ್ಯಂತ ಶುಕ್ರವಾರದವರೆಗೆ 40,18,11,892 ಮಾದರಿಗಳನ್ನು ಪರೀಕ್ಷಿಸಲಾಗಿದೆ. 2021ರ ಜೂನ್‌ 1ರವರೆಗೆ ದೇಶದಲ್ಲಿ 35 ಕೋಟಿ ಕೋವಿಡ್‌–19 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ತಿಳಿಸಿದೆ.
‘ದೇಶದಾದ್ಯಂತ ಈ ಪರೀಕ್ಷೆಗಳಿಗೆ ಬೇಕಾದ ಅಗತ್ಯ ಮೂಲಸೌಕರ್ಯವನ್ನು ಹೆಚ್ಚಿಸುವ ಮೂಲಕ, ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಇದರಿಂದ ವೇಗವಾಗಿ ಮಾದರಿಗಳ ಪರೀಕ್ಷೆಗಳು ನಡೆಯುತ್ತಿವೆ. ಲಭ್ಯ ತಂತ್ರಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಲಾಗಿದೆ‘ ಎಂದು ಐಸಿಎಂಆರ್ ತಿಳಿಸಿದೆ.‌ಐಸಿಎಂಆರ್ ನಿರ್ದೇಶಕ ಪ್ರೊ. ಬಲರಾಮ್ ಭಾರ್ಗವ್‌, ‘ಕೋವಿಡ್‌ ಪರೀಕ್ಷೆ ಪ್ರಮಾಣ ಹೆಚ್ಚಿಸಿರುವುದರಿಂದ ಸೋಂಕಿತರನ್ನು ಗುರುತಿಸಿ, ಪತ್ಯೇಕವಾಗಿರಿಸಲು ಅನುಕೂಲವಾಗಿದೆ. ಅಷ್ಟೇ ಅಲ್ಲ, ಕೋವಿಡ್‌ ಸೋಂಕಿತರಿಗೆ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಲೂ ಸಹಕಾರಿಯಾಗಿದೆ‘ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇಂಥ ಹಲವು ಕ್ರಮಗಳಿಂದಾಗಿ ದೇಶದಲ್ಲಿ ಕೊರೊನಾ ಸೋಂಕಿನ ಸಾವಿನ ಪ್ರಮಾಣ ಇಳಿಯುತ್ತಿವೆ.
‘ಈ ಹೊಸ ಮೈಲಿಗಲ್ಲಿನಿಂದಾಗಿ, ‘5ಟಿ‘ ವಿಧಾನಗಳನ್ನು (ಟೆಸ್ಟ್‌, ಟ್ರ್ಯಾಕ್, ಟ್ರೇಸ್‌, ಟ್ರಿಟ್‌ ಮತ್ತು ಟೆಕ್ನಾಲಜಿ ಬಳಕೆ) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಭಾರತ ಯಶಸ್ವಿಯಾಗಿರುವುದಕ್ಕೆ ಸಾಕ್ಷಿಯಾಗಿದೆ. ಇದು ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸಹಕಾರಿಯಾಗಿದೆ‘ ಎಂಬ ಅವರು ಪ್ರಕಟಣೆಯಲ್ಲಿ ಉಲ್ಲೇಖಿಸಿದ್ದಾರೆ.

Indresh KC

Recent Posts

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

4 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

13 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

33 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

43 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 hours ago