ನವದೆಹಲಿ: ದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ 42,618 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,45,907ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,05,681ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 36,385 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,00,001ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 17,04,970 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 52,82,40,038 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.