ದೇಶದಲ್ಲಿ ಕಳೆದ 24 ಗಂಟೆಯಲ್ಲಿ 9,419 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 159 ಮಂದಿ ಬಲಿಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 3,46,66,241ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 4,74,111ಕ್ಕೆ ಜಿಗಿತ ಕಂಡಿದೆ.
ದೇಶದಲ್ಲಿ ಒಂದು ದಿನದಲ್ಲಿ 8251 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 3,40,97,388ಕ್ಕೆ ಏರಿಕೆಯಾಗಿದೆ.