News Karnataka Kannada
Tuesday, May 07 2024
ದೇಶ

ದೇಶದ ಬಹುತೇಕ ರಾಜ್ಯಗಳಲ್ಲಿ ಉತ್ತಮ ಮಳೆ ; ಕೆಲವೆಡೆ ರೆಡ್‌ ಅಲರ್ಟ್‌

Rain Delhi 15 7 21
Photo Credit :

ದೆಹಲಿ : ದೇಶದ ಬಹುತೇಕ ರಾಜ್ಯಗಳಲ್ಲಿ ನೈರುತ್ಯ ಮಾನ್ಸೂನ್​ನಿಂದಾಗಿ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಮುಂದಿನ ಜುಲೈ 16ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ. ಮಂಗಳವಾರ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಕೂಡ ಉತ್ತಮ ಮಳೆಯಾಗಿದೆ. ಬುಧವಾರ ಬೆಳಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪಿ ಮಳೆಯಾಗುತ್ತಿದೆ. ದೇಶದಲ್ಲೂ ಮೊದಲ ಬಾರಿಗೆ ನೈರುತ್ಯ ಮುಂಗಾರು ಎಲ್ಲೆಡೆ ವ್ಯಾಪಿಸಿದ್ದು, ದೇಶದಾದ್ಯಂತ ಉತ್ತಮ ಮಳೆಯಾಗುತ್ತಿದೆ. ಮುಂದಿನ ಜುಲೈ 16ರವರೆಗೂ ಮಳೆ ಇದೇ ರೀತಿ ಮುಂದುವರೆಯಲಿದ್ದು, ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಳೆಯಿಂದಾಗಿ ದೇಶದ ಅನೇಕ ಭಾಗಗಳಲ್ಲಿ ಈಗಾಗಗಲೇ ರೆಡ್​ ಅಲರ್ಟ್​ ಸಹ ಘೋಷಣೆ ಮಾಡಲಾಗಿದೆ.

ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಈಗಾಗಲೇ ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್​ ಆಲರ್ಟ್​ ಘೋಷಿಸಲಾಗಿದೆ. ಬಲವಾದ ಗಾಳಿ ಬೀಸುವ ಹಿನ್ನಲೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ಈ ಗಾಳಿ ಗುಜರಾತ್ ​ವರೆಗೂ ಸಾಗಲಿದ್ದು, ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಜೂನ್​ನಲ್ಲಿ ವಾಡಿಕೆ ಮಳೆ ಕೊರತೆ ಅನುಭವಿಸಿದ್ದ ಕೇರಳದಲ್ಲಿ ಮುಂದಿನ ನಾಲ್ಕು ದಿನ ಭಾರೀ ಪ್ರಮಾಣದ ಮಳೆಯಾಗಲಿದ್ದು, ಇಡುಕ್ಕಿ, ಕಣ್ಣೂರು, ಕಸರಾಗೋಡ್​​ ಆರೆಂಜ್​ ಆಲರ್ಟ್​, ಮತ್ತು ಉಳಿದ ಜಿಲ್ಲೆಗಳಲ್ಲಿ ಹಳದಿ ಆಲರ್ಟ್​ ಘೋಷಿಸಲಾಗಿದೆ. ಮಳೆ ಹಿನ್ನಲೆ ಜನರು ಎಚ್ಚರಿಕೆ ವಹಿಸುವಂತೆ ಐಎಂಡಿ ತಿಳಿಸಿದೆ. ರಾಜ್ಯದಲ್ಲಿ ಕೇವಲ 408.44 ಮಿಮೀ ಮಳೆಯಾಗಿದೆ. ಇದು ಶೇ 36ರಷ್ಟು ಕಡಿಮೆ ಮಳೆ. ಜೂನ್​ನಲ್ಲಿ ಸಾಮಾನ್ಯವಾಗಿ 643 ಮಿ.ಮೀ ವಾಡಿಕೆ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡು , ಆಂಧ್ರತಮಿಳುನಾಡಿನ ಕೊಯಿಮತ್ತೂರು, ಥೆನಿ, ನೀಲಿಗಿರಿಯ ಪಶ್ವಿಮ ಘಟ್ಟದಲ್ಲಿ ಕೂಡ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ. ಬಂಗಾಳ ಕೊಲ್ಲಿಯ ಮಧ್ಯ ಪಶ್ಚಿಮ ಮತ್ತು ವಾಯುವ್ಯದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಲಿದೆ. ಈ ಹಿನ್ನಲೆ ಆಂಧ್ರ ಪ್ರದೇಶ ಮತ್ತು ಒಡಿಶಾದಲ್ಲೂ ಕೂಡ ಮಳೆಯಾಗಲಿದೆ. ಆಂಧ್ರ ಪ್ರದೇಶದ ರಾಯಲ ಸೀಮಾದಲ್ಲಿ ಕೂಡ ಸಾಧಾರಣಾ ಮಳೆಯಾದರೆ, ಪೂರ್ವ ಗೋದಾವರಿ, ವಿಶಾಖ ಪಟ್ಟಣಂನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಜರಾತ್​ನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಕೂಡ ಇದೆ, ಅದರಲ್ಲೂ ಮುಖ್ಯವಾಗಿ ಪಶ್ಚಿಮ ಗುಜರಾತ್​ಮ ರಾಜ್​ಕೋಟ್​, ಅಮ್ರೇಲಿ, ಅಹಮದಬಾದ್​, ಭಾವನಗರ್​ ಸೂರತ್​, ಕೆಶೋಡ್​ನಲ್ಲಿ ಮುಂದಿನ 24 ರಿಂದ 48 ಗಂಟೆ ಸಾಧಾರಣಾ ಮಳೆಯಾಗುವ ನಿರೀಕ್ಷೆ ಇದೆ.
ಮಹಾರಾಷ್ಟ್ರದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಮುಂದುನ ಮೂರು ನಾಲ್ಕು ದಿನ ಇದೇ ರೀತಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು