News Karnataka Kannada
Saturday, May 04 2024
ದೇಶ

ದೇಶದ ಮೊದಲ ಕೋವಿಡ್‌ ರೋಗಿಗೆ ಮತ್ತೆ ಸೋಂಕು

Covid
Photo Credit :

ತ್ರಿಶೂರ್‌ : ದೇಶದ ಮೊದಲ ಕೋವಿಡ್‌ ರೋಗಿ , ಚೀನಾದ ವುಹಾನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿಗೆ ಮತ್ತೊಮ್ಮೆ ಕೋವಿಡ್‌ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ‘ವಿದ್ಯಾಭ್ಯಾಸಕ್ಕೆಂದು ನವದೆಹಲಿಗೆ ತೆರಳುವ ಸಲುವಾಗಿ ಆರ್ಟಿ–ಪಿಸಿಆರ್ ಪರೀಕ್ಷೆಗೆ ಮಾಡಿದ್ದರು. ಈ ವೇಳೆ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರಲ್ಲಿ ಸೋಂಕಿನ ಯಾವುದೇ ರೋಗಲಕ್ಷಣಗಳಿಲ್ಲ. ಸದ್ಯ ಅವರು ಮನೆಯಲ್ಲೇ ಪ್ರತ್ಯೇಕ ವಾಸವಾಗಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ’ ಎಂದು ಅವರು ಹೇಳಿದ್ದಾರೆ.
ಚೀನಾದ ವುಹಾನ್ ವಿಶ್ವವಿದ್ಯಾಲಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ ಸೆಮಿಸ್ಟರ್ ರಜೆಯಲ್ಲಿ ಭಾರತಕ್ಕೆ ಮರಳಿದ್ದರು. 2020ರ ಜನವರಿ 30ರಂದು ಅವರಲ್ಲಿ ಸೋಂಕು ದೃಢಪಟ್ಟಿತ್ತು. ಇದು ಭಾರತದ ಪ್ರಥಮ ಕೋವಿಡ್ ಪ್ರಕರಣವಾಗಿತ್ತು. ಮೂರು ವಾರಗಳ ಚಿಕಿತ್ಸೆಯ ಬಳಿಕ ಅವರು ಗುಣಮುಖರಾಗಿದ್ದರು.‘ಆರ್ಟಿ–ಪಿಸಿಆರ್ ಪರೀಕ್ಷೆಯಲ್ಲಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆ್ಯಂಟಿಜನ್ ಪರೀಕ್ಷೆಯ ಫಲಿತಾಂಶವು ನೆಗೆಟಿವ್ ಬಂದಿತ್ತು’ ಎಂದು ತ್ರಿಶೂರ್ ನ ಡಿಎಂಆರ್ ಡಾ.ಕೆ.ಜೆ ರೀನಾ ಅವರು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು