ದೇಶಾದ್ಯಂತ ಇಂದು 2020-21ನೇ ಸಾಲಿನ ನೀಟ್ ಎಕ್ಸಾಂ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ಗಳಿಗಾಗಿ ನಡೆಯುತ್ತಿರುವ ಪರೀಕ್ಷೆ ಇದಾಗಿದೆ.
ಕರ್ನಾಟಕದ 9 ನಗರಗಳಲ್ಲಿ 201 ಪ್ರಮುಖ ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಒಟ್ಟು 180 ಪ್ರಶ್ನೆಗಳಿದ್ದು, ಪ್ರತಿ ಒಂದು ಪ್ರಶ್ನೆಗೆ 720 ಅಂಕಗಳಿರುತ್ತದೆ. 13 ಭಾಷೆಗಗಳಲ್ಲಿ ಪರೀಕ್ಷೆ ನಡೆಯಲಿದೆ.