ಬೀಜಿಂಗ್: ವಾಯವ್ಯ ಚೀನಾದ ಗಿಜ್ಹೋವ್ ಪ್ರಾಂತ್ಯದಲ್ಲಿ ಪ್ರಯಾಣಿಕರ ದೋಣಿಯೊಂದು ಮುಳುಗಿ ಕನಿಷ್ಠ 8 ಮಂದಿ ಸಾವಿಗೀಡಾಗಿದ್ದಾರೆ ಮತ್ತು 7 ಮಂದಿ ನಾಪತ್ತೆಯಾಗಿದ್ದಾರೆ.
ಜಾಂಗ್ಕೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ. 40 ಜನರು ಪ್ರಯಾಣಿಸಬಹುದಾದ ಸಾಮರ್ಥ್ಯವನ್ನು ದೋಣಿ ಹೊಂದಿತ್ತು. ದೋಣಿ ಮುಳುಗಿದ ಸಂದರ್ಭದಲ್ಲಿದ್ದ ಪ್ರಯಾಣಿಕರ ನಿಖರ ಸಂಖ್ಯೆಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
8 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು 39 ಜನರನ್ನು ರಕ್ಷಿಸಲಾಗಿದೆ. ತನಿಖೆ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.