News Karnataka Kannada
Thursday, May 09 2024
ವಿದೇಶ

ದ ಆಫ್ರಿಕಾದ ಮಾಜಿ ಅದ್ಯಕ್ಷರ ಬಂಧನ ಖಂಡಿಸಿ ಪ್ರತಿಭಟನೆ ; 75 ಮಂದಿ ಬಲಿ

South Africa 15 7 21
Photo Credit :

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್‌ ಜುಮಾ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲಿಗಟ್ಟಿದ ಬೆನ್ನಲ್ಲೇ ಭೂಗಿಲೆದ್ದ ಗಲಭೆ ಮತ್ತು ಹಿಂಸಾಚಾರಕ್ಕೆ ಸುಮಾರು 75 ಮಂದಿ ಬಲಿಯಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಅವರಿಗೆ ಬೆಂಬಲ ವ್ಯಕ್ತಪಡಿಸಿ ಹಿಂಸಾಚಾರದಲ್ಲಿ ತೊಡಗಿದ್ದ 1350 ಮಂದಿಯನ್ನು ಬಂಧಿಸಲಾಗಿದೆ.
ಜೋಹಾನ್ಸ್‌ಬರ್ಗ್‌ ಹೊರವಲಯದ ಸೊವೆಟೊದಲ್ಲಿ ಗಲಭೆಕೋರರು ಅಂಗಡಿ ಮುಂಗಟ್ಟುಗಳನ್ನು ಲೂಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಉಂಟಾದ ಘರ್ಷಣೆ ಮತ್ತು ಕಾಲ್ತುಳಿತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಕ್ವಾಜುಲು–ನಟಾಲ್‌ ಪ್ರಾಂತ್ಯದಲ್ಲಿ ನಡೆದ ಗಲಭೆ, ಹಿಂಸಾಚಾರದಲ್ಲಿ 27 ಜನರು ಮೃತಪಟ್ಟಿದ್ದಾರೆ. ಗೌಟೆಂಗ್‌ ಪ್ರಾಂತ್ಯದಲ್ಲಿ 45 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಮೂರು ಪ್ರಾಂತ್ಯಗಳಲ್ಲಿನ ಗಲಭೆ, ಕಾಲ್ತುಳಿತದಲ್ಲಿ ಸತ್ತವರ ಸಂಖ್ಯೆ 75 ಕ್ಕೇರಿದಂತಾಗಿದೆ. ಗೌಟೆಂಗ್‌ ಹಾಗೂ ಕ್ವಾಜುಲು–ನಟಾಲ್‌ ಪ್ರಾಂತ್ಯಗಳಲ್ಲಿ ಕಳೆದ ಐದು ದಿನಗಳಿಂದ ಗಲಭೆ, ಅಂಗಡಿಗಳ ಲೂಟಿ ನಡೆಯುತ್ತಿದೆ. ಮಂಗಳವಾರವೂ ಈ ಪ್ರಾಂತ್ಯಗಳಲ್ಲಿ ಅಂಗಡಿಗಳ ಲೂಟಿ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಅಧ್ಯಕ್ಷ ಸಿರಿಲ್‌ ರಾಮಫೊಸಾ ಅವರು ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ.
ಭ್ರಷ್ಟಾಚಾರ ಪ್ರಕರಣವೊಇಂದರಲ್ಲಿ ಆರೋಪಿಯಾಗಿದ್ದ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್‌ ಜುಮಾ ಅವರಿಗೆ ನ್ಯಾಯಾಲಯವು 15 ತಿಂಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅವರನ್ನು ಬಂಧಿಸಿ ಜೈಲಿಗೆ ಕಳಿಸಲಾಗಿತ್ತು. ಅವರನ್ನು ಜೈಲಿಗೆ ಕಳಿಸಿದ ನಂತರ ಅವರ ಬೆಂಬಲಿಗರು ನಡೆಸಿದ ಹಿಂಸಾಚಾರದಿಂದ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು