ಮುಂಬೈ ಐಷಾರಾಮಿ ಹಡಗಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನ್ನು ಎನ್ಸಿಬಿ ಬಂಧಿಸಿದ್ದು, ವಿಚಾರಣೆ ವೇಳೆ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ.
“ಕಳೆದ ನಾಲ್ಕು ವರ್ಷದಿಂದ ನಾನು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದೆ. ಈ ವಿಷಯ ನನ್ನ ತಂದೆ ಶಾರುಖ್ ಖಾನ್ ಮತ್ತು ತಾಯಿ ಗೌರಿಗೂ ಗೊತ್ತಿದೆ” ಎನ್ ಸಿ ಬಿ ಮುಂದೆ ಆರ್ಯನ್ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
“ಬರೀ ಭಾರತದಲ್ಲಿ ಅಷ್ಟೇ ಅಲ್ಲ, ನಾನು ಯುಕೆ, ದುಬೈ ಸೇರಿ ಇನ್ನಿತರ ದೇಶಗಳಲ್ಲಿ ವಾಸವಾಗಿದ್ದಲೂ ಅಲ್ಲಿಯೂ ಡ್ರಗ್ಸ್ ತೆಗೆದುಕೊಂಡಿದ್ದೇನೆ ಎಂದು ವಿಚಾರಣೆ ವೇಳೆ ಒಪ್ಪಿಕೊಂಡು ಆರ್ಯನ್ ಗಳಗಳ ಅತ್ತಿರುವುದಾಗಿ ವರದಿಯಾಗಿದೆ.
ಶನಿವಾರ ಮುಂಬೈನ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಎನ್ಸಿಬಿ ಆರ್ಯನ್ ಖಾನ್ ಸೇರಿ ಒಟ್ಟು 8 ಮಂದಿಯನ್ನು ಬಂಧಿಸಿದೆ.