ಪ್ರಧಾನಿ ನರೇಂದ್ರ ಮೋದಿ ಅವರು ಗತಿಶಕ್ತಿ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದ್ದು, ಅ.13ರಂದು ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದು ಡಿಜಿಟಲ್ ಪ್ಲಾಟ್ ಫಾರ್ಮ್ ಆಗಿದ್ದು, ಇದರಲ್ಲಿ ರೈಲ್ವೆ ಮತ್ತು ರಸ್ತೆ ಸೇರಿದಂತೆ 16 ಸಚಿವಾಲಯಗಳನ್ನು ಒಳಗೊಂಡಿರುವ ಸಮಗ್ರ ಯೋಜನೆಯಾಗಿದೆ. ಇದರಿಂದ ಮೂಲ ಸೌಕರ್ಯ ಸಂಪರ್ಕ ಯೋಜನೆ ಕೂಡ ಅನುಷ್ಠಾನಕ್ಕೆ ಬರಲಿದೆ.
ದೇಶದಾದ್ಯಂತದ ಪ್ರಮುಖ ಕೈಗಾರಿಕಾ ಸಮೂಹಗಳಿಗೆ ಸಂಪರ್ಕ ಕಲ್ಪಿಸಲು ಮತ್ತು ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ. ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯಂದು, ಸಮಗ್ರ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಪ್ರಧಾನಿ ಮೋದಿ ಗತಿ ಶಕ್ತಿ ಮಾಸ್ಟರ್ ಪ್ಲಾನ್ ಆರಂಭಿಸುವುದಾಗಿ ಘೋಷಿಸಿದ್ದರು.