ನವದೆಹಲಿ : ಕಳೆದ 24 ಗಂಟೆಗಳಲ್ಲಿ ಒಟ್ಟು 72,86,883 ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 29.67 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 42.83 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದೆ.
ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,591 ಹೊಸ ಕೇಸ್ ಪತ್ತೆಯಾಗಿದ್ದು 338 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.