Categories: ದೇಶ

ನಿಯಮ ಉಲ್ಲಂಘಿಸಿದಕ್ಕಾಗಿ ಕಾಂಗ್ರೆಸ್‌ ನಾಯಕರ ಟ್ವಿಟರ್‌ ಲಾಕ್‌: ಸ್ಪಷ್ಟನೆ

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ಬಹಿರಂಗ ಪಡಿಸುವ ಮೂಲಕ ನಿಯಮ ಉಲ್ಲಂಘಿಸಿದಕ್ಕಾಗಿ ರಾಹುಲ್‌ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರ ಖಾತೆಗಳನ್ನು ಲಾಕ್‌ ಮಾಡಲಾಗಿದೆ ಎಂದು ಟ್ವಿಟರ್‌ ಸಂಸ್ಥೆ ಸ್ಪಷ್ಟಪಡಿಸಿದೆ.

ದೆಹಲಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೊವನ್ನು ರಾಹುಲ್‌ ಗಾಂಧಿ ಸೇರಿ ಹಲವು ಕಾಂಗ್ರೆಸ್‌ ನಾಯಕರು ಟ್ವೀಟ್‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯನ್ನು ಕೂಡ ಲಾಕ್‌ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

‘ಸಂಸ್ಥೆಯ ನಿಯಮಗಳನ್ನು ಕಾನೂನಿಗೆ ಅನುಸಾರವಾಗಿ ಜಾರಿಗೆ ತರಲಾಗಿದೆ. ಇದು ಸೇವೆಯನ್ನು ಬಳಸುವ ಎಲ್ಲರಿಗೂ ಸಮಾನವಾಗಿ ಅನ್ವಯವಾಗುತ್ತದೆ. ಈ ಹಿಂದೆಯೂ ನಮ್ಮ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸುವ ಫೋಟೋಗಳನ್ನು ಹಂಚಿಕೊಂಡ ನೂರಾರು ಟ್ವೀಟ್‌ಗಳ ವಿರುದ್ಧ ಕ್ರಮಕೈಗೊಂಡಿದ್ದೆವು. ಮುಂದೆಯೂ ಇದನ್ನು ಅನುಸರಿಸುತ್ತೇವೆ. ಕೆಲವೊಂದು ಖಾಸಗಿ ಮಾಹಿತಿಗಳ ಬಹಿರಂಗದಿಂದ ಹೆಚ್ಚಿನ ಅಪಾಯ ಎದುರಾಗಬಹುದು ಎಂದು ಸಂಸ್ಥೆ ಹೇಳಿದೆ.

Sampriya YK

Recent Posts

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

4 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

4 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

7 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

19 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

28 mins ago

ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ

ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ…

32 mins ago