News Karnataka Kannada
Saturday, April 27 2024
ಪಂಜಾಬ್

ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಇಂದು ಹೊಸ ರಾಜಕೀಯ ಪಕ್ಷ ಘೋಷಣೆ ಸಾಧ್ಯತೆ

Amarinder Singh
Photo Credit :

ಚಂಡೀಗಢ : ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಇಂದು ತಮ್ಮ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅವರ ಹಿತಾಸಕ್ತಿಗಾಗಿ ಪರಿಹರಿಸಿದರೆ 2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.

ಮಂಗಳವಾರ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಅವರು ಬುಧವಾರ ಚಂಡೀಗಢದಲ್ಲಿ ಮಾಜಿ ಸಿಎಂ ಅಮರಿಂದರ್ ಸಿಂಗ್ ಸುದ್ದಿಗೋಷ್ಠಿ ಕರೆದಿದ್ದು, ಇಂದು ಹೊಸ ರಾಜಕೀಯ ಪಕ್ಷದ ಘೋಷಣೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಗೆ ವಿದಾಯ ಹೇಳಿದ ನಂತರ, ಅಮರಿಂದರ್ ಸಿಂಗ್ ಅವರು ಜನರ ಹಿತಾಸಕ್ತಿಗಳನ್ನು ಪೂರೈಸಲು ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಕಳೆದ ವಾರ ಹೇಳಿದ್ದರು. ಅವರು ರಾಜೀನಾಮೆ ನೀಡಿದ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಮಾಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು