ದೇಶ

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಶಿಫಾರಸು

ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಅವರ ಹೆಸರನ್ನು ಪಂಜಾಬ್ ಕಾಂಗ್ರೆಸ್ ಸಮಿತಿ ಶಿಫಾರಸು ಮಾಡಿದೆ.

ಇವರು ಸಹ ಅಮರಿಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ರಾಹುಲ್ ಗಾಂಧಿ ಅವರ ಮನೆಯಲ್ಲಿ ಈ ಸಂಬಂಧ ಸುದೀರ್ಘ ಚರ್ಚೆ ನಡೆಯುತ್ತಿದೆ. ಹಿರಿಯ ನಾಯಕಿ ಅಂಬಿಕಾ ಸೋನಿ ಸಹ ಚರ್ಚೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಾಂಗ್ರೆಸ್​ನ ಪಂಜಾಬ್​ ಘಟಕದಲ್ಲಿ ಈಚಿನ ದಿನಗಳಲ್ಲಿ ಆದ ಕೆಲ ಬೆಳವಣಿಗೆಗಳಿಂದ ಬೇಸತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ರಾಜೀನಾಮೆ ನೀಡಿದ್ದರು. ಮುಖ್ಯಮಂತ್ರಿ ರಾಜೀನಾಮೆಯ ಒಂದು ದಿನದ ನಂತರ, ಅಂದರೆ ಭಾನುವಾರ ಪಕ್ಷದ ಶಾಸಕರ ಸಭೆ ನಡೆದಿತ್ತು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ವಿಂದರ್ ರಂಧಾವಾ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಅಮರಿಂದರ್ ಸಿಂಗ್ ಸಂಪುಟದಲ್ಲಿ ಸುಖ್ಜಿಂದರ್ ರಂಧಾವಾ ಸೆರೆಮನೆ ಮತ್ತು ಸಹಕಾರ ಇಲಾಖೆಯ ರಾಜ್ಯಖಾತೆ ಸಚಿವರಾಗಿದ್ದರು.

Sampriya YK

Recent Posts

ಮೋದಿ ವಿರುದ್ಧ ಸ್ಪರ್ಧಗೆ ಮುಂದಾಗಿದ್ದ ಕಾಮೆಡಿಯನ್‌ ಶ್ಯಾಮ್ ನಾಮಪತ್ರ  ರಿಜೆಕ್ಟ್‌!

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸ್ಟ್ಯಾಂಡಪ್‌ ಕಾಮಿಡಿಯನ್‌ ಶ್ಯಾಮ್ ರಂಗೀಲಾ ಅವರ ನಾಮಪತ್ರ…

10 mins ago

ಪ್ಯಾಶನ್ ಫ್ರೂಟ್: ಇದರಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು?

ಈ ಹಣ್ಣು ಹುಳಿ ರುಚಿಯನ್ನು ಹೊಂದಿದ್ದರೂ ಆರೋಗ್ಯ ವಿಚಾರದಲ್ಲಿ ಸಿಹಿ ಗುಣಗಳನ್ನು ಹೊಂದಿದೆ. ಇದನ್ನು ಬೆಳೆಯಲು ಉಷ್ಣ ವಲಯ ಅತ್ಯುತ್ತಮ.…

25 mins ago

ರಾಶಿ ಭವಿಷ್ಯ: ಲಕ್ಷ್ಮೀ ನಾರಾಯಣ ಯೋಗ ಯಾವ ರಾಶಿಗೆ ಲಾಭ? ಯಾರಿಗೆ ನಷ್ಟ?

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 16…

38 mins ago

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

9 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

9 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

9 hours ago