News Karnataka Kannada
Tuesday, May 07 2024
ದೇಶ

ಪೆಗಾಸಸ್‌ ಗೂಢಚರ್ಯೆ ರಾಷ್ಟ್ರೀಯ ಭದ್ರತೆಯ ವಿಷಯವಾಗಿದ್ದರೆ ಸರ್ಕಾರ ಬಹಿರಂಗಪಡಿಸುವುದು ಬೇಡ ಎಂದ ಸುಪ್ರೀಂ

Supreme Court 30 6 21
Photo Credit :

ನವದೆಹಲಿ: ‘ಪೆಗಾಸಸ್‌ ಗೂಢಚರ್ಯೆ ಪ್ರಕರಣ ಕುರಿತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಕೇಂದ್ರ ಸರ್ಕಾರವು ಬಹಿರಂಗಪಡಿಸಬೇಕು ಎಂದು ತಾನು ಬಯಸುವುದಿಲ್ಲ’ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಸ್ಪಷ್ಟಪಡಿಸಿತು.
ಪೆಗಾಸಸ್‌ ಗೂಢಚರ್ಯೆ ಪ್ರಕರಣವನ್ನು ಕುರಿತಂತೆ ಸ್ವತಂತ್ರ ತನಿಖೆ ನಡೆಸಲು ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್ ಅನ್ನೂ ಜಾರಿ ಮಾಡಿತು.
ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ಪೀಠದ ಎದುರು, ‘ಮಾಹಿತಿಯು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ‘ ಎಂದು ಕೇಂದ್ರ ಸರ್ಕಾರ ತಿಳಿಸಿತು. ಆಗ ಮೇಲಿನ ಮಾತು ಹೇಳಿದ ಪೀಠವು, ಈ ಕುರಿತ ಅರ್ಜಿಗಳ ವಿಚಾರಣೆಯನ್ನು 10 ದಿನದ ನಂತರ ತೆಗೆದುಕೊಳ್ಳಲಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿತು.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಅನಿರುದ್ಧ ಭೋಸ್‌ ಅವರೂ ಸದಸ್ಯರಾಗಿದ್ದ ಪೀಠವು, ಸರ್ಕಾರ ಈ ಕುರಿತು ಸಮಗ್ರ ಪ್ರಮಾಣಪತ್ರ ಸಲ್ಲಿಸಲಿದೆ ಎಂದು ಭಾವಿಸಿದ್ದೆವು ಎಂದೂ ಹೇಳಿತು. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್‌ ತುಷಾರ್‌ ಮೆಹ್ತಾ, ಈಗಾಗಲೇ ಸಲ್ಲಿಸಿದ ಪ್ರಮಾಣಪತ್ರದಲ್ಲಿಯೇ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ ಎಂದರು. ‘ಈಗಾಗಲೇ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಎದುರು ಕೇಂದ್ರ ಸರ್ಕಾರ ನಿಂತಿದೆ. ನಮ್ಮ ದೃಷ್ಟಿಕೋನದಿಂದ ಈ ಅಂಶವನ್ನು ಪರಿಶೀಲಿಸಬೇಕು‘ ಎಂದೂ ಮೆಹ್ತಾ ಅವರು ಕೋರಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು