ದೇಶ

ಪೆಟ್ರೋಲ್, ಡೀಸೆಲ್ ಬೆಲೆ ಅತಿ ಹೆಚ್ಚು ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದ ನಂತರ ದೇಶದ 22 ರಾಜ್ಯಗಳಲ್ಲಿ ಇಂಧನ ದರ ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ದರ ಇಳಿಕೆ ಮಾಡಿಲ್ಲ. ಕೇಂದ್ರಾಡಳಿತ ಪ್ರದೇಶ ಸೇರಿ 14 ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿಲ್ಲವೆಂದು ಕೇಂದ್ರ ಸರ್ಕಾರ ತಿಳಿಸಿದೆ.

ಕರ್ನಾಟಕದಲ್ಲಿ ಡೀಸೆಲ್ ದರವನ್ನು ಅತಿ ಹೆಚ್ಚು ಇಳಿಕೆ ಮಾಡಲಾಗಿದೆ. ಪ್ರತಿ ಲೀಟರ್ ಗೆ 19.49 ರೂ. ಇಳಿಕೆಯಾಗಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಅಂದರೆ ಒಂದು ಲೀಟರ್ ಪೆಟ್ರೋಲ್ ಗೆ 13.35 ರೂಪಾಯಿ ಇಳಿಕೆ ಮಾಡಲಾಗಿದೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ 5 ರೂ., ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 7 ರೂ. ವ್ಯಾಟ್ ಕಡಿತಗೊಳಿಸಿದೆ. ಇದರಿಂದಾಗಿ ದೇಶದಲ್ಲಿಯೇ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಅತಿ ಕಡಿಮೆಯಾಗಿದೆ ಎಂದು ಹೇಳಲಾಗಿದೆ.

Swathi MG

Recent Posts

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

7 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

22 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

36 mins ago

ಪುಟಾಣಿ ಕಲಾವಿದೆಯ ಕಲಾಸಿರಿಯ ಅನಾವರಣ: ಬಾಲಕಿಯ ಅದ್ಭುತ ಪ್ರದರ್ಶನಕ್ಕೆ ವ್ಯಾಪಕ ಮೆಚ್ಚುಗೆ

ಪುಟಾಣಿ ಕಲಾವಿದೆ ಹತ್ತು ವರ್ಷದ ಕುಮಾರಿ ಗಂಗಾ ಶಶಿಧರ್ ಬಳಗದ ವಯೋಲಿನ್ ವಾದನ ಕಛೇರಿ ಕಾರ್ಯಕ್ರಮ ಉಡುಪಿಯ ಶ್ರೀ ಕೃಷ್ಣಮಠದ…

38 mins ago

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

50 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

53 mins ago