ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಕಚ್ಚಾ ತೈಲ ಬೆಲೆ ಏರಿಕೆ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಅಬಕಾರಿ ಸುಂಕ ಕಡಿತ ಮಾಡಿದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕೂಡ ಅಬಕಾರಿ ಸುಂಕ ಕಡಿತ ಮಾಡಬೇಕು ಎಂಬ ಕೂಗು ಎದ್ದಿದ್ದು, ಆದರೆ ಇದಕ್ಕೆ ಕೇಂದ್ರ ಸರ್ಕಾರ ನಕಾರ ವ್ಯಕ್ತಪಡಿಸಿದೆ.
ಈ ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ಗೆ ನೀಡಿದ್ದ ಸಬ್ಸಿಡಿಗೆ ಬದಲಾಗಿ ಪಾವತಿ ಮಾಡಬೇಕಿರುವ ಮೊತ್ತವು ಸುಂಕ ಕಡಿತಕ್ಕೆ ಅವಕಾಶ ಕೊಡುತ್ತಿಲ್ಲ.. ಎಂದು ಹೇಳುವ ಮೂಲಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಧ್ಯಕ್ಕೆ ಪೆಟ್ರೋಲ್, ಡೀಸೆಲ್ ಸುಂಕ ಕಡಿತ ಇಲ್ಲ ಎಂದು ಹೇಳಿದ್ದಾರೆ.