Categories: ದೇಶ

ಪೇಜಾವರಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೊಸದಿಲ್ಲಿಯಲ್ಲಿ ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ಹೊಸದಿಲ್ಲಿ ತೆರಳಿದ್ದ ಸಂದರ್ಭದಲ್ಲಿ ಈ ಭೇಟಿ ನಡೆಯಿತು. ಈ ಭೇಟಿಯ ಬಗ್ಗೆ ಶ್ರೀಗಳು ಮತ್ತು ಪ್ರಧಾನಮಂತ್ರಿಗಳು ಅತೀವ ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಪ್ರಧಾನಿ ಮೋದಿಯವರು ಶ್ರೀವಿಶ್ವೇಶತೀರ್ಥರನ್ನು ವಿಶೇಷವಾಗಿ ಸ್ಮರಿಸಿದರು. ರಾಮಮಂದಿರ ನಿರ್ಮಾಣ ಕಾರ್ಯಗಳ ಪ್ರಗತಿಯ ಕುರಿತೂ ಈರ್ವರೂ ಸಮಾಲೋಚನೆಗೈದರು.

ಪ್ರಧಾನಿ ನರೇಂದ್ರ ನೋದಿ ಅವರಿಗೆ ಯಕ್ಷಗಾನದ ಕೇದಗೆ ಮುಂಡಾಸಿನ ಕಿರೀಟ ತೊಡಿಸಿ ಜರತಾರಿ ಶಾಲು, ಬೆಳ್ಳಿಯ ತಟ್ಟೆಯಲ್ಲಿ ಉಡುಪಿ ಶ್ರೀಕೃಷ್ಣನ ಗಂಧ , ನಿರ್ಮಾಲ್ಯ ತುಳಸಿ ನೀಡಿ ಆಶೀರ್ವದಿಸಿದರು. ಉಡುಪಿಯ ಚಿತ್ರಕಲಾವಿದೆ ವಸಂತಲಕ್ಷ್ಮೀ ಹೆಬ್ಬಾರ್ ಅವರು ರಚಿಸಿದ ಮೋದಿ ಅವರು ಉಡುಪಿ ಕೃಷ್ಣನಿಗೆ ಕೈಮುಗಿಯುವ ಭಂಗಿಯ ಸುಂದವಾದ ತೈಲಚಿತ್ರ ಹಾಗೂ ಸಂಸ್ಕೃತ , ಕನ್ನಡ , ತುಳು ಲಿಪಿಗಳಲ್ಲಿ ನರೇಂದ್ರ ಮೋದಿ ಅವರ ಹೆಸರನ್ನು ಕೆತ್ತಿದ ಸ್ಮರಣಿಕೆಯನ್ನೂ ಶ್ರೀಗಳು ಪ್ರಧಾನಮಂತ್ರಿಯವರಿಗೆ ನೀಡಿದರು.

ಕೃಷ್ಣ ದರ್ಶನಕ್ಕೆ ಆಗಮಿಸಲು ಆಹ್ವಾನ:
ಈ (ಪ್ರಧಾನ ಮಂತ್ರಿ ಅಧಿಕಾರದ) ಅವಧಿಯಲ್ಲೇ ಉಡುಪಿ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳು ಆಹ್ವಾನಿಸಿದರು.‌ ಖಂಡಿತ ಬಂದೇ ಬರುತ್ತೇನೆ ಚಿಂತೆ ಬೇಡ ಎಂದು ಮೋದಿಯವರು ತುಂಬ ಹರ್ಷದಿಂದಲೇ ತಿಳಿಸಿದರು.

ಇದೇ ಸಂದರ್ಭದಲ್ಲಿ ದೇಶದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿಗೊಳಿಸುವುದು, ದೇಶಾದ್ಯಂತ ಹಿಂದು ಶ್ರದ್ಧಾ ಕೇಂದ್ರಗಳನ್ನು ಸರಕಾರಿ ವ್ಯವಸ್ಥೆಯಿಂದ ಸ್ವಾಯತ್ತಗೊಳಿಸುವುದು, ಮಹರ್ಷಿ ವೇದವ್ಯಾಸರ ಜಯಂತಿಯನ್ನು (ಆಷಾಢ ಪೂರ್ಣಿಮಾ ಅಥವಾ ಒಂದು ನಿರ್ದಿಷ್ಟ ದಿನಾಂಕವನ್ನು) ತತ್ತ್ವಜ್ಞಾನ ದಿನ ಅಥವಾ ಅಧ್ಯಾತ್ಮ ದಿನ ಎಂದು ಘೋಷಿಸಿ ಸರಕಾರಿ ಆಚರಣೆಗೆ ವ್ಯವಸ್ಥೆಗೊಳಿಸುವುದು ಹಾಗೂ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ಎಂಬ ನಾಲ್ಕು ಅಪೇಕ್ಷೆಗಳನ್ನು ಲಿಖಿತವಾಗಿ ನೀಡಿದರು.

ಈ ಬಗ್ಗೆಯೂ ಗಮನಹರಿಸುವುದಾಗಿ ಪ್ರಧಾನಿ ಮೋದಿ ಅವರು ತಿಳಿಸಿದರು.‌ ಈ ವೇಳೆ ಪೇಜಾವರ ಮಠದ ದಿವಾನ  ಎಂ. ರಘು ರಾಮಾಚಾರ್ಯ, ಶ್ರೀಗಳ ಕಾರ್ಯದರ್ಶಿ ಡಿ.ಪಿ. ಅನಂತ್, ಸಾಮಾಜಿಕ ಕಾರ್ಯಕರ್ತ ಶ್ರೀಗಳ ಆಪ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

4 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

4 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago