ಟೋಕಿಯೊ: ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತದ ಅಥ್ಲೀಟ್ ಗಳು ಶ್ರೇಷ್ಟ ಪ್ರದರ್ಶನ ನೀಡಿದ್ದು, ಭಾರತದ ಪದಕಗಳ ಗಳಿಕೆ 19ಕ್ಕೆ ಏರಿಕೆಯಾಗಿದೆ.
ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಐದು ಚಿನ್ನ, ಎಂಟು ಬೆಳ್ಳಿ ಮತ್ತು ಆರು ಕಂಚಿನ ಪದಕಗಳೊಂದಿಗೆ ಒಟ್ಟು 19ಪದಕಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದ್ದು, ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತವು ತನ್ನ ಅತಿದೊಡ್ಡ ಪದಕ ದಾಖಲೆಯನ್ನು ದಾಖಲಿಸಿದೆ.