ದೆಹಲಿ : ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾ ಬೆನ್ ಪಟೇಲ್ ಬೆಳ್ಳಿ ಪದಕ ಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಪ್ಯಾರಾಲಿಂಪಿಕ್ಸ್ ನಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಸ್ಪರ್ಧೆಯ ಫೈನಲ್ ನಲ್ಲಿ ಚೀನಾದ ಜೋ ಯಿಂಗ್ ವಿರುದ್ಧ 0-3 ಅಂತರದಲ್ಲಿ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಟೇಬಲ್ ಟೆನಿಸ್ನಲ್ಲಿ ಭಾರತಕ್ಕೆ ಮೊದಲ ಪದಕ ಗಳಿಸಿರುವ ಖ್ಯಾತಿ ಭಾವಿನಾ ಪಟೇಲ್ ಗೆ ಸೇರಲಿದೆ.