Categories: ದೇಶ

ಪ್ರತಿಪಕ್ಷಗಳಿಂದ ಕೊರೋನ ರಾಜಕೀಯ ; ಮೋದಿ ಟೀಕೆ

ವದೆಹಲಿ : ಕೊರೋನಾ ಲಸಿಕೆಗಳು ಲಭ್ಯವಿದ್ದರೂ ಸಹ ಪ್ರತಿಪಕ್ಷಗಳು ಬೇಕಂತಲೇ ಸರ್ಕಾರದ ವಿರುದ್ದ ಟೀಕಾ ಪ್ರಹಾರ ನಡೆಸುತಿದ್ದು ಇದು ಈ ದೇಶದ ದುರಂತ ಹಾಗೂ “ಅತ್ಯಂತ ದುರದೃಷ್ಟಕರ” ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷಗಳ ವಿರುದ್ದ ಮಂಗಳವಾರ ಕಟುವಾಗಿ ಟೀಕಿಸಿದರು.
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡುತಿದ್ದ ಅವರು ಲಸಿಕೆಗಳ ಕೊರತೆಯ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ, ಏಕೆಂದರೆ ಲಭ್ಯತೆಯನ್ನು ಎಲ್ಲಾ ಕಡೆ ದೊರಕುವಂತೆ ಮಾಡಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಲಸಿಕೆ ವ್ಯರ್ಥವಾಗುವುದನ್ನು ತಡೆಯಲು ಪ್ರತಿಪಕ್ಷಗಳು ಸೇರಿದಂತೆ ಎಲ್ಲಾ ಕಡೆಯಿಂದ ಏಕೀಕೃತ ಪ್ರಯತ್ನಗಳು ನಡೆಯಬೇಕು ಎಂದು ಅವರು ಹೇಳಿದರು ಮತ್ತು ಲಸಿಕೆ ತೆಗೆದುಕೊಳ್ಳಲು ಜನರು ಹಿಂಜರಿಯುತ್ತಿದ್ದು ಅದನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಹಾಗೂ ಜನರನ್ನು ತಲುಪಲು ಉಪಾಯಗಳನ್ನು ಸರ್ಕಾರಕ್ಕೆ ತಿಳಿಸಬೇಕು ಎಂದು ತಮ್ಮ ಪಕ್ಷದ ಸಹೋದ್ಯೋಗಿಗಳನ್ನು ಕೇಳಿದರು. ಇದೇ ವೇಳೆ ದೆಹಲಿಯ ಆಮ್​ ಆದ್ಮಿ ಸರ್ಕಾರದ ನಡೆಯನ್ನು ವಿರೋಧಿಸಿದ ಪಿಎಂ ಮೋದಿ ಇದು “ಅತ್ಯಂತ ದುರದೃಷ್ಟಕರ” ಮತ್ತು “ಇದು ಜನರ ಮೇಲಿನ ತಮ್ಮ ಕಾಳಜಿಯನ್ನು ತೋರಿಸುತ್ತದೆ” ಎಂದು ಹೇಳಿದರು, ಏಕೆಂದರೆ ಸುಮಾರು ಮುಂಚೂಣಿಯಲ್ಲಿ ಕೆಲಸ ಮಾಡುತ್ತಿರುವ 20% ಕಾರ್ಮಿಕರಿಗೆ ರಾಷ್ಟ್ರ ರಾಜಧಾನಿಯಲ್ಲಿ ಆಮ್​ ಆದ್ಮಿ ಪಕ್ಷದ ಸರ್ಕಾರ ಲಸಿಕೆ ನೀಡಿಲ್ಲ. ಕಾಂಗ್ರೆಸ್ ಪಕ್ಷದ ವಿಚಾರ ತೆಗೆದುಕೊಂಡು ಪ್ರಧಾನಿ, ದೇಶದ ಕೇವಲ ಎರಡು ಅಥವಾ ಮೂರು ರಾಜ್ಯಗಳಿಗೆ ಮಾತ್ರ ಸೀಮಿತವಾಗಿರುವ ಪಕ್ಷವು ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸುತ್ತಿದೆ. ಎರಡನೇ ಅವಧಿಯಲ್ಲಿ ದಾಖಲೆಯ ಅಂತರದೊಂದಿಗೆ ಬಿಜೆಪಿಯನ್ನು ದೇಶದ ಜನರು ಆಯ್ಕೆ ಮಾಡಿರುವುದನ್ನು ಅವರ ಕೈಯಲ್ಲಿ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಆದ ಕಾರಣ ಈ ರೀತಿ ಕಾಲೆಳೆಯುವ ತಂತ್ರ ಮಾಡುತ್ತಿದೆ ಎಂದರು.
ಇತಿಹಾಸದಲ್ಲೇ ಕೇಸರಿ ಪಕ್ಷವು ಬಹಳ ಕಷ್ಟ ಪಟ್ಟು ಈ ಮಟ್ಟಕ್ಕೆ ಬಂದಿದೆ, ಅಲ್ಲದೇ ಅತ್ಯಂತ ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ನಮ್ಮನ್ನು ಪ್ರತಿಪಕ್ಷಗಳು ಸಹಿಸುತ್ತಿಲ್ಲ ಆದ ಕಾರಣ. ತಮ್ಮ ಪಕ್ಷದ ಸದಸ್ಯರು ಸಕ್ರಿಯವಾಗಿ ಮತ್ತು ಸಂಸತ್ತಿನಲ್ಲಿ ಹಾಜರಿರಬೇಕು ಮತ್ತು ಶಾಸನಗಳನ್ನು ನಿರ್ಬಂಧಿಸಲು ವಿರೋಧ ಪಕ್ಷಗಳು ಮಾಡುವ ಯಾವುದೇ ಪ್ರಯತ್ನವನ್ನು ತಡೆಯುವ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಆಗ್ರಹಿಸಿದರು.

Indresh KC

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

13 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

27 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

40 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

57 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago