Categories: ದೇಶ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 9 ನೇ ಕಂತಿನ ಹಣ ನಾಳೆ ಜಮೆಯಾಗಲಿದೆ.

ನವದೆಹಲಿ : ಸಣ್ಣ ಹಿಡುವಳಿದಾರರಿಗೆ ಅನಕೂಲವಾಗಲೆಂದು ಕೇಂದ್ರ  ಸರ್ಕಾರದ ಮಹತ್ವಾಕಾಂಕ್ಷೆ  ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್  ನಿಧಿ ಯೋಜನೆಯಡಿ ನಾಳೆ ರೈತರ ಬ್ಯಾಂಕ್ ಖಾತೆಗಳಿಗೆ 9 ನೇ ಕಂತಿನ ಎರಡು  ಸಾವಿರ ರೂ.  ಹಣ ಜಮೆಯಾಗಲಿದೆ.
ಸರಿಸುಮಾರು 9 ಕೋಟಿ 75 ಲಕ್ಷ ರೈತರಿಗೆ ನಾಳೆ ಎರಡು ಸಾವಿರ ರೂ   ಜಮೆಯಾಗಲಿದೆ. ಕೇಂದ್ರ ಸರ್ಕಾರ ವಾರ್ಷಿಕವಾಗಿ ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ 2 ಸಾವಿರದಂತೆ ಒಟ್ಟು  ಆರು ಸಾವಿರ ರೂಪಾಯಿಗಳನ್ನು  ನೇರ ವರ್ಗಾವಣೆ ಮಾಡುತ್ತಿದೆ.
ಪ್ರಧಾನಮಂತ್ರಿ ಕಚೇರಿ ಮೂಲಗಳ ಪ್ರಕಾರ ನಾಳೆ ದೇಶದ 9 ಕೋಟಿ 75 ಲಕ್ಷ  ರೈತರ ಬ್ಯಾಂಕ್ ಖಾತೆಗಳಿಗೆ,19 ಸಾವಿರದ 500 ಕೋಟಿ  ರೂಪಾಯಿ ಜಮೆ ಮಾಡಲಾಗುವುದು. .
ಸಾಮಾನ್ಯವಾಗಿ  ಮೊದಲ ಕಂತು ಏಪ್ರಿಲ್-ಜುಲೈ ನಡುವೆ, ಆಗಸ್ಟ್ ನಿಂದ ನವೆಂಬರ್ ವರೆಗೆ ಎರಡನೇ ಕಂತು ಮತ್ತು ಡಿಸೆಂಬರ್ ನಿಂದ ಮಾರ್ಚ್ ವರೆಗೆ ಮೂರನೇ ಕಂತಿನ ಹಣ ನೀಡಲಾಗುತ್ತದೆ .
2021ರ ಮೇ 14 ರಂದು 8ನೇ ಕಂತಿನ ಹಣ ಸಂದಾಯವಾಗಿತ್ತು. ನಾಳೆ ಪ್ರಧಾನಿ ಮೋದಿ ಅವರು   ರೈತರ ಖಾತೆಗೆ ಹಣ ಜಮೆ ಮಾಡುವುದಲ್ಲದೇ  ಆಯ್ದ ರೈತರ ಜೊತೆಗೆ ಸಂವಾದ ನಡೆಸಲಿದ್ದಾರೆ, ಈ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಹ ಭಾಗಿಯಾಗಲಿದ್ದಾರೆ ಎಂದು ಪಿಎಂ  ಕಚೇರಿ ಮೂಲಗಳು ತಿಳಿಸಿವೆ.
Raksha Deshpande

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

5 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

5 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

6 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

6 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago