ಸೇಲಂ: ವೈದ್ಯಕೀಯ ಆಕಾಂಕ್ಷಿ ಭಾನುವಾರ ನೀಟ್ ಪರೀಕ್ಷೆಗೂ ಕೆಲವೇ ಗಂಟೆಗಳ ಮುನ್ನ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಎಸ್ ಧನುಷ್(19) ಎಂಬ ವಿದ್ಯಾರ್ಥಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೇಲಂನ ಮೆಟ್ಟೂರು ಸಮೀಪದ ಕೂಝೈಯೂರ್ ನಿವಾಸಿ ಧನುಷ್ ಈ ಮೊದಲು ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದರು. ಆದರೆ ವೈದ್ಯಕೀಯ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಹಾಗಾಗಿ, ಅವರು ಭಾನುವಾರ ನಿಗದಿಯಾಗಿದ್ದ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಿದರು. ಧನುಷ್ ಮೇಚೇರಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಮತ್ತೆ ನೀಟ್ ಪರೀಕ್ಷೆಯಲ್ಲಿ ಫೇಲ್ ಆಗಬಹುದು ಎಂಬ ಆತಂಕದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.