ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಸೇನಾ ಪಡೆಗಳು ಮಂಗಳವಾರ ನಡೆಸಿದ ಎನ್ಕೌಂಟರ್ನಲ್ಲಿ ಭಯೋತ್ಪಾದಕನೊಬ್ಬ ಬಲಿಯಾಗಿದ್ದಾನೆ.
‘ಬಂಡಿಪೋರಾದ ಚಾಂದಜಿ ಪ್ರದೇಶದಲ್ಲಿ ಉಗ್ರರು ಅಡಗಿರುವ ನಿಖರ ಮಾಹಿತಿ ಮೇರೆಗೆ ಭದ್ರತಾ ಪಡೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಈ ಮೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭದ್ರತಾ ಪಡೆಯು ಪ್ರತ್ಯುತ್ತರ ನೀಡಿದೆ’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.
ಗುಂಡಿನ ಕಾಳಗದಲ್ಲಿ ಉಗ್ರನೊಬ್ಬ ಮೃತಪಟ್ಟಿದ್ದಾನೆ. ಆತನ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.