ಮುಂಬಯಿ: ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದ ಅವರಿಗೆ ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಸ್ವತಃ ನಟ ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನ್ನ ತಾಯಿಯೇ ನನ್ನ ಮೂಲ. ಇಂದು ನಾನು ನನ್ನ ಅಸ್ತಿತ್ವದ ಮೂಲದಲ್ಲಿ ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬವು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…
ನಟ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್…
ಕಾಲಿವುಡ್ ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…
ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…
ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…