News Karnataka Kannada
Tuesday, April 30 2024
ದೇಶ

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ಮಹತ್ವದ ಚರ್ಚೆ ಸಾಧ್ಯತೆ

Modi Main 1 Newsk 6981522169
Photo Credit :

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಈ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದಿಕ್ಸೂಚಿ ಭಾಷಣ ಮಾಡಲಿದ್ದು, ಪ್ರಧಾನಿ ಮೋದಿ ಸಮಾರೋಪ ಭಾಷಣ ಮಾಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಳ್ಳಲಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್, ಮಣಿಪುರ, ಉತ್ತರಾಖಂಡ್, ಉತ್ತರ ಪ್ರದೇಶ ಮತ್ತು ಗೋವಾ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಈ ಕಾರ್ಯಕಾರಿಣಿ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಈ ಸಭೆಯಲ್ಲಿ 124 ಸದಸ್ಯರು ಪಾಲ್ಗೊಳ್ಳಲಿದ್ದು, ಕೆಲವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ. ಕೊರೋನಾ ಕಾರಣದಿಂದ ಇತರ ರಾಜ್ಯಗಳ ಮುಖ್ಯಮಂತ್ರಿಗಳು, ಮುಖಂಡರನ್ನು ದೆಹಲಿಗೆ ಆಹ್ವಾನ ನೀಡಿಲ್ಲ, ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಇತ್ತೀಚೆಗೆ ರಾಷ್ಟ್ರದ ಹಲವು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ದೊರೆತ ಮಿಶ್ರ ಫಲಿತಾಂಶದ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು