Categories: ದೇಶ

ಬಿಹಾರದಲ್ಲಿ ಕಳ್ಳ ಭಟ್ಟಿ ಸಾರಾಯಿ ಕುಡಿದು 16 ಜನರ ಸಾವು

ಪಾಟ್ನಾ : ಬಿಹಾರ ರಾಜ್ಯದ ವೆಸ್ಟ್ ಚಂಪಾರಣ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ 16 ಮಂದಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ 2-3 ದಿನದಲ್ಲಿ ಈ ದುರಂತ ಸಂಭವಿಸಿದ್ದು, ಇದಕ್ಕೆ ಕಾರಣ ಸ್ಪಷ್ಟವಾಗಿ ಗೊತ್ತಾಗಿಲ್ಲ. ಕಳ್ಳಬಟ್ಟಿ ಸಾರಾಯಿ ಕುಡಿದು ಜನರು ಸಾವನ್ನಪ್ಪಿದ್ದಾರೆ ಎಂಬುದು ಪೊಲೀಸರ ಶಂಕೆ. ಆದರೆ, ಸಾವನ್ನಪ್ಪಿದವರಲ್ಲಿ ಬಹುತೇಕ ಮಂದಿ ಯಾವುದೇ ಸಾರಾಯಿ ಕುಡಿದಿರಲಿಲ್ಲ ಎಂದು ಅವರ ಕುಟುಂಬದವರು ಹೇಳಿದ್ಧಾರೆ. ಚಂಪರಂನ ಜಿಲ್ಲಾ ಮ್ಯಾಜಿಸ್ಟ್ರೇಟ್ ಕುಂಡನ್ ಕುಮಾರ್ ಕೂಡ ಇದನ್ನು ಪುನರುಚ್ಚರಿಸಿದ್ದಾರೆ. ಸಾವನ್ನಪ್ಪಿದವರು ಸಾರಾಯಿ ಸೇವನೆ ಮಾಡಿದ ಬಗ್ಗೆ ಅವರ ಕುಟುಂಬದವರು ಏನೂ ಪ್ರಸ್ತಾಪಿಸಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ, 16 ಮಂದಿಯ ಸಾವಿಗೆ ಕಾರಣ ಏನು ಎಂಬುದು ಸದ್ಯಕ್ಕಂತೂ ನಿಗೂಢವಾಗಿದೆ. ಆದರೆ, ಕಳ್ಳಬಟ್ಟಿ ಸಾರಾಯಿಯಿಂದ ಸಾವನ್ನಪ್ಪಿರುವ ಶಂಕೆ ಗಟ್ಟಿಯಾಗಿರುವುದರಿಂದ ರಾಜಕೀಯ ಕೆಸರೆರಚಾಟವೂ ನಡೆದಿದೆ.
ಇದೇ ವೇಳೆ, ಕಳ್ಳಬಟ್ಟಿ ಸಾರಾಯಿ ಶಂಕೆಯ ಮೇರೆಗೆ ಪೊಲೀಸರು ಐದು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಕೂಡ ಮಾಡುತ್ತಿದ್ದಾರೆ. ಜಿಲ್ಲಾಡಳಿತವು ಇಬ್ಬರು ಗ್ರಾಮ ಚೌಕಿದಾರರನ್ನು ಅಮಾನತುಗೊಳಿಸಿದೆ. ಘಟನೆ ಸಂಬಂಧ ಎಫ್​ಐಆರ್ ದಾಖಲಾಗಿದೆ. ಸಾವನ್ನಪ್ಪಿದವರ ಶವಸಂಸ್ಕಾರ ನಡೆಸಿಯಾಗಿರುವುದರಿಂದ ಸಾವಿಗೆ ಕಾರಣ ಏನೆಂದು ವೈದ್ಯಕೀಯವಾಗಿ ದೃಢೀಕರಿಸಲು ಆಗಿಲ್ಲ. ಇದೇ ವೇಳೆ, ಬೇರೆ ಯಾವುದಾದರೂ ಕಾಯಿಲೆ ಇದ್ದಿರಬಹುದಾ ಎಂಬ ಸಂಶಯವೂ ಇರುವುದರಿಂದ ದೇವರಾವ ಮತ್ತು ಬಗಾಹಿ ಗ್ರಾಮಗಳಲ್ಲಿ ವೈದ್ಯಕೀಯ ತಂಡಗಳನ್ನ ನಿಯೋಜಿಸಲಾಗಿದ್ದು, ಯಾರಿಗಾದರೂ ಅನಾರೋಗ್ಯವಾದಲ್ಲಿ ಚಿಕಿತ್ಸೆ ನೀಡಲು ಸಕಲ ವ್ಯವಸ್ಥೆ ಮಾಡಲಾಗಿದೆ.
“ಸಾವನ್ನಪ್ಪಿದವರ ಕುಟುಂಬ ಸದಸ್ಯರನ್ನ ಒಳಗೊಂಡಂತೆ 40 ಜನರ ಹೇಳಿಕೆಗಳನ್ನ ಪಡೆದಿದ್ದೇವೆ. ಆದರೆ, ಸಾರಾಯಿ ಸೇವನೆಯಿಂದ ಸಾವಾಗಿರುವ ವಿಚಾರವನ್ನು ಅವರ್ಯಾರೂ ಒಪ್ಪುತ್ತಿಲ್ಲ. ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬ ಮಾತ್ರ ತಾನು ಸಾರಾಯಿ ಕುಡಿದಿದ್ದೆ ಎಂದು ಒಪ್ಪಿಕೊಂಡಿದ್ದಾನೆ” ಎಂದು ಬಿಹಾರದ ಪೊಲೀಸ್ ಉಪ ಮಹಾನಿರ್ದೇಶಕ ಲಲನ್ ಮೋಹನ್ ಪ್ರಸಾದ್ ತಿಳಿಸಿದ್ದಾರೆ.
ಬಿಹಾರ ರಾಜ್ಯದಲ್ಲಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ಏರಿದ ಬಳಿಕ 2016ರಿಂದ ಸಾರಾಯಿ ನಿಷೇಧ ಮಾಡಲಾಗಿದೆ. ಆದರೆ, ಸರ್ಕಾರದ ಈ ಕ್ರಮದಿಂದ ಅಕ್ರಮ ಸಾರಾಯಿ ಮಾರಾಟ ಮತ್ತು ಕಳ್ಳಬಟ್ಟಿ ಸಾರಾಯಿ ಹೆಚ್ಚುತ್ತಿದೆ ಎಂಬುದು ವಿಪಕ್ಷಗಳ ಆಪಾದನೆ. ಚಂಪರಂನಲ್ಲಿ ಸಂಭವಿಸಿದರುವ ಸಾವು ಘಟನೆಗಳನ್ನ ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಆಡಳಿತ ಪಕ್ಷದ ವಿರುದ್ಧ ಎರಗಿಬೀಳಲು ಬಳಸಿಕೊಂಡಿದ್ಧಾರೆ. ಒಳ್ಳೆಯ ಆಡಳಿತದ ಹೆಸರಿನಲ್ಲಿ ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಪ್ರತೀ ವರ್ಷ ಸಾವಿರಾರು ಮಂದಿ ಸಾಯುತ್ತಿದ್ದಾರೆ ಎಂದು ಲಾಲೂ ವ್ಯಂಗ್ಯ ಮಾಡಿದ್ಧಾರೆ.
“…ನಿಷೇಧದ ನೆಪದಲ್ಲಿ ಆಡಳಿತ ಪಕ್ಷದ ಜನರು ಅಕ್ರಮವಾಗಿ ಪರ್ಯಾಯ ಆರ್ಥಿಕತೆ ಸೃಷ್ಟಿಸಿಕೊಂಡಿದ್ದಾರೆ. ಇದು 20 ಸಾವಿರ ಕೋಟಿ ಮೊತ್ತದ ಹಗರಣವಾಗಿದೆ. ನಿಷೇಧದ ಕಾರಣವೊಡ್ಡಿ ಲಕ್ಷಾಂತರ ಮಂದಿ ದಲಿತರು ಮತ್ತು ಬಡವರನ್ನ ಜೈಲಿಗೆ ತಳ್ಳಲಾಗಿದೆ. ಪೊಲೀಸರು ಭ್ರಷ್ಟರಾಗಿದ್ದಾರೆ” ಎಂದು ಮಾಜಿ ಬಿಹಾರ ಮುಖ್ಯಮಂತ್ರಿಯೂ ಆದ ಲಾಲೂ ಪ್ರಸಾದ್ ಯಾದವ್ ಟ್ವೀಟ್ ಮಾಡಿದ್ದಾರೆ.

Indresh KC

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

2 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

4 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago