ಬ್ರಾಹ್ಮಣ ಸಮುದಾಯದ ವಿರುದ್ಧ ವಿವಾದತ್ಮಕ ಹೇಳಿಕೆ, ಛತ್ತೀಸ್ ಗಢ ಮುಖ್ಯಮಂತ್ರಿ ತಂದೆ ಬಂಧನ

ರಾಯ್‌ ಪುರ್‌ : ಬ್ರಾಹ್ಮಣ ಸಮುದಾಯದ ವಿರುದ್ಧ ವಿವಾದತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಅವರು ವಿರುದ್ಧ ಪ್ರಕರಣ ದಾಖಲಾಗಿದ್ದು ಇಂದು ಏಕಾಏಕಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಭೂಪೇಶ್ ಬಘೇಲ್‌ ಅವರ ತಂದೆ ನಂದ್ ಕುಮಾರ್ ಬಘೇಲ್ ಅವರನ್ನು ಬಂಧಿಸಿದ ಪೊಲೀಸರು ರಾಯಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನಂದ ಕುಮಾರ್ ಬಘೇಲ್‌ ಕೆಲವು ದಿನಗಳ ಹಿಂದೆ ರಾಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬ್ರಾಹ್ಮಣರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂದರ್ಭದಲ್ಲಿ ಬ್ರಾಹ್ಮಣರು ಗ್ರಾಮಗಳಿಗೆ ಪ್ರವೇಶಿಸದಂತೆ ನೋಡಿಕೊಳ್ಳುವಂತೆ ಜನತೆಗೆ ಕರೆ ನೀಡಿದ್ದರು. ದೇಶದ ಎಲ್ಲ ಗ್ರಾಮೀಣ ಜನರಿಗೆ ನನ್ನ ಕೋರಿಕೆ ಇಷ್ಟೆ . ಬ್ರಾಹ್ಮಣರು ನಿಮ್ಮ ಗ್ರಾಮಗಳಿಗೆ ಪ್ರವೇಶಿಸದಂತೆ ನೋಡಿಕೊಳ್ಳಿ ಎಂದು ನಂದ ಕುಮಾರ್ ಬಘೇಲ್‌ ಮನವಿ ಮಾಡಿದ್ದರು. ಇತರ ಸಮಾಜದ ಜನರೊಂದಿಗೆ ತಾವು ಈ ವಿಷಯವಾಗಿ ಮಾತನಾಡುವುದಾಗಿ. ಎಲ್ಲರೂ ಒಗ್ಗೂಡಿ ಬ್ರಾಹ್ಮಣರನ್ನು ಗ್ರಾಮಗಳಿಂದ ಬಹಿಷ್ಕರಿಸೋಣ ಎಂದು ಕರೆ ನೀಡಿದ್ದರು.

ವೋಲ್ಗಾ ನದಿಯ ತೀರಕ್ಕೆ ಅವರನ್ನು ವಾಪಸ್ ಕಳುಹಿಸಬೇಕಾದ ಅಗತ್ಯವಿದೆ ಎಂಬ ನಂದ್ ಕುಮಾರ್ ಅವರ ಹೇಳಿಕೆ, ಬ್ರಾಹ್ಮಣ ಸಮುದಾಯವನ್ನು ಆಕ್ರೋಶಗೊಳ್ಳುವಂತೆ ಮಾಡಿದೆ. ರಾಜ್ಯವೊಂದರ ಮುಖ್ಯಮಂತ್ರಿಯ ತಂದೆಯಾಗಿ, ಒಂದು ಸಮಾಜವನ್ನು ಬಹಿಷ್ಕರಿಸುವಂತೆ ಜವಬ್ದಾರಿಇಲ್ಲದೆ.. ದ್ವೇಷ ಪೂರಿತವಾಗಿ ಮಾತನಾಡಿರುವುದು ಎಷ್ಟು ಸರಿ ಎಂದು ಬ್ರಾಹ್ಮಣರು, ಬ್ರಾಹ್ಮಣ ಸಂಘಗಳು, ರಾಜಕೀಯ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಡಿ ಡಿ ನಗರ್‌ ಪೊಲೀಸ್‌ ಠಾಣೆಗೆ ‘ಸರ್ವ ಬ್ರಾಹ್ಮಣ ಸಮಾಜದ’ ಸದಸ್ಯರು ದೂರು ದಾಖಲಿಸಿದ್ದರು.

ಬ್ರಾಹ್ಮಣ ಸಮುದಾಯದ ದೂರಿನ ಹಿನ್ನಲೆಯಲ್ಲಿ  ನಗರ ಪೊಲೀಸ್ ಠಾಣೆಯ ಪ್ರಭಾರಿ ಯೋಗಿತಾ ಕಪರ್ಡೆ ಪ್ರತಿಕ್ರಿಯಿಸಿ, ನಂದಕುಮಾರ್ ಬಘೇಲ್‌ ನೀಡಿರುವ ಹೇಳಿಕೆಗಳಿಗೆ ಬ್ರಾಹ್ಮಣ ಸಮುದಾಯ ಆಕ್ಷೇಪ ವ್ಯಕ್ತಪಡಿಸಿ ದೂರು ನೀಡಿದೆ. ಅವರ ಹೇಳಿಕೆಗಳು ಸಮಾಜದಲ್ಲಿ ದ್ವೇಷವನ್ನು ಪ್ರಚೋದಿಸುವ ಗುರಿಯನ್ನು ಹೊಂದಿವೆ ಎಂದು ಎಂದು ಯೋಗಿತಾ ಕಪರ್ಡೆ ಹೇಳಿದ್ದಾರೆ. ಇನ್ನೂ ಮುಖ್ಯಮಂತ್ರಿ ಬಘೇಲ್‌ ಕೂಡಾ ತಮ್ಮ ತಂದೆಯನ್ನು ಒಬ್ಬ ಮಗನಾಗಿ ಗೌರವಿಸುತ್ತೇನೆ. ಆದರೆ ಮುಖ್ಯಮಂತ್ರಿಯಾಗಿ ಅವರ ತಪ್ಪುಗಳನ್ನು ಒಪ್ಪಿಕೊಳ್ಳಲಿಲ್ಲ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Raksha Deshpande

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

15 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

57 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

60 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago