News Karnataka Kannada
Saturday, May 04 2024
ದೇಶ

ಭದ್ರತಾ ಪಡೆಯ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿ

Terrorist Pulwama Main 08072021
Photo Credit :

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಲ್ಲಿಯವರೆಗೆ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ.

ಪುಲ್ವಾಮ ಜಿಲ್ಲೆಯ ಪಂಪೋರ್ ಪ್ರದೇಶದ ಖ್ರೆವ್ ನಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಪ್ರದೇಶ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದರು.

ಈ ವೇಳೆ ಇದ್ದಕ್ಕಿದ್ದಂತೆ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್ ಕೌಂಟರ್ ಆಗಿ ಬದಲಾಯಿತು. ಎನ್ ಕೌಂಟರ್ ನಲ್ಲಿ ಇದುವರೆಗೆ ಇಬ್ಬರು ಉಗ್ರಗಾಮಿಗಳು ಹತ್ಯೆಗೊಂಡಿದ್ದಾರೆ. ಇನ್ನೂ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು