Categories: ದೇಶ

ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯಿಸಲು ದೇಶಾದ್ಯಂತ ಎನ್‌ಎಸ್‌ಜಿ ಕಮ್ಯಾಂಡೋಗಳಿಂದ ಅಣಕು ಪ್ರದರ್ಶನ

ನವದೆಹಲಿ, ; ಭಯೋತ್ಪಾದಕ ದಾಳಿಯಾದ ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿಯ ಪೂರ್ವಸಿದ್ಧತೆಯಗಿ ಎನ್‍ಎಸ್‍ಜಿ ಕಮ್ಯಾಂಡೋ ಪಡೆಗಳು ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ ಅಣಕು ಪ್ರದರ್ಶನ ನಡೆಸಿವೆ. ಗಾಂಡಿವ್ ಹೆಸರಿನ ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಸೇರಿದಂತೆ ವಿಚ್ಛಿದ್ರಕಾರಿ ಶಕ್ತಿಗಳು ದಾಳಿ ಮಾಡಿದಾಗ ಹೇಗೆ ಪ್ರತಿಕ್ರಿಯಿಸಬೇಕು. ಆಯಾ ಪ್ರದೇಶಗಳು ಗುಣಲಕ್ಷಣಗಳೇನು, ಭೌಗೋಳಿಕ ಆಯಕಟ್ಟುಗಳೇನು ಎಂಬೆಲ್ಲಾ ಮಾಹಿತಿಗಳನ್ನು ಅಣಕು ಪ್ರದರ್ಶನದ ವೇಳೆ ಮನದಟ್ಟು ಮಾಡಿಕೊಳ್ಳಲಾಗುತ್ತದೆ.
ಸಮಾಜಘಾತಕ ಶಕ್ತಿಗಳು ವಾಹನಗಳನ್ನು ಹೈಜಾಕ್ ಮಾಡಿದರೆ, ದೇಶಿಯ ಹಾಗೂ ಅಂತರರಾಷ್ಟ್ರೀಯ ಪ್ರಜೆಗಳು ಹಾಗೂ ಗಣ್ಯರನ್ನು ಒತ್ತೆಯಾಳಾಗಿಟ್ಟುಕೊಂಡಾಗ ಯಾವ ರೀತಿ ಪ್ರತಿಕ್ರಿಯಿಸಬೇಕು ಎಂಬ ಕುರಿತು ಶಸ್ತ್ರಸ್ತ್ರಸಜ್ಜಿತ ಯೋಧರು ಮಾಕ್‍ಡ್ರಿಲ್ ನಡೆಸಿದ್ದಾರೆ. ರಾಷ್ಟ್ರೀಯ ಭದ್ರತಾ ಪಡೆ ಆಗಸ್ಟ್ 22ರಿಂದ 28ರ ನಡುವೆ ಅಣಕು ಪ್ರದರ್ಶನ ನಡೆಸುವುದಾಗಿ ಪ್ರಕಟಿಸಿದೆ.
ಅದಕ್ಕಾಗಿ ದೇಶದ ಆಯಾಕಟ್ಟಿನ 35 ಸ್ಥಳಗಳನ್ನು ಗುರುತಿಸಲಾಗಿದೆ. ಉತ್ತರ ಪ್ರದೇಶ, ಮಧ್ಯ ಪ್ರದೇಶ, ಗುಜರಾತ್, ತಮಿಳುನಾಡು, ಹೈದರಾಬಾದ್ ಪಶ್ಚಿಮ ಬಂಗಾಳ, ಮಹಾರಾಷ್ಟ್ರದಲ್ಲಿ ಮೊದಲ ಹಂತದ ಅಣಕು ಪ್ರದರ್ಶನಗಳು ನಡೆಯುತ್ತಿವೆ. ಆಯ್ದುಕೊಂಡ ರಾಜ್ಯಗಳಲ್ಲಿ ಪ್ರಮುಖವಾದ ಸ್ಥಳಗಳು, ಕಚೇರಿಗಳು, ಪ್ರವಾಸಿ ತಾಣಗಳು, ಜನನಿಬೀಡ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಕಮಾಂಡೋಗಳು ಪೂರ್ವ ತಯಾರಿ ನಡೆಸಿದ್ದಾರೆ.

Indresh KC

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

1 min ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

17 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

21 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

43 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago