News Karnataka Kannada
Friday, May 03 2024
ದೇಶ

ಭಾರತದಲ್ಲಿ ಒಂದೇ ದಿನದಲ್ಲಿ 33,376 ಹೊಸ ಕೋವಿಡ್‌ ಪ್ರಕರಣ

coivd 19
Photo Credit :

ನವದೆಹಲಿ: ಭಾರತದಲ್ಲಿ ಒಂದೇ ದಿನದಲ್ಲಿ 33,376 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3.32 ಕೋಟಿಗೆ (3,32,08,330) ಏರಿಕೆಯಾಗಿದೆ.

ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 308 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದ ಒಟ್ಟು ಸಾವಿನ ಸಂಖ್ಯೆಯು 4,42,317ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,91,516ಕ್ಕೆ ಹೆಚ್ಚಿದೆ. ಇದು ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 1.18ರಷ್ಟು ಪಾಲನ್ನು ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಹೇಳಿದೆ.

ದೇಶದ ಒಟ್ಟು ಕೋವಿಡ್‌ ಚೇತರಿಕೆ ಪ್ರಮಾಣವು ಶೇಕಡ 97.49ರಷ್ಟಿದೆ. ಶುಕ್ರವಾರ 15,92,135 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 54,01,96,989 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ದೇಶದ ದೈನಂದಿನ ಸೋಂಕು ದೃಢ ದರವು ಶೇಕಡ 2.10ರಷ್ಟಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು