ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 10,423 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 443 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,96,237ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,58,880ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,53,776ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 15,021 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,36,83,581ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 10,09,045 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 61,02,10,339 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,06,85,71,879 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…
ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…
ದೇಶದ್ಯಾಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…
ಪೊಲೀಸ್ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.
ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್…
ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.