ದೇಶ

ಭಾರತದಲ್ಲಿ ವಿದೇಶಿ ಪ್ರಜೆಗಳಿಗಾಗಿ ಪರಿಚಯವಾಗಲಿದೆ ವಿಶೇಷ ವೀಸಾ ವರ್ಗ: ಪ್ರಧಾನಿ ಮೋದಿ

 ಭಾರತದಲ್ಲಿ ಮುಂದಿನ ದಿನಗಳಲ್ಲಿ ಆಯುಷ್ ಚಿಕಿತ್ಸಾ ಕ್ರಮಗಳನ್ನು ಪಡೆಯಲು ಬರಲು ಬಯಸುವ ವಿದೇಶಿ ಪ್ರಜೆಗಳಿಗೆ ವಿಶೇಷ ವೀಸಾ ವರ್ಗವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಮೂರು ದಿನಗಳ ಜಾಗತಿಕ ಆಯುಷ್ ಹೂಡಿಕೆ ಮತ್ತು ನಾವೀನ್ಯತೆ ಶೃಂಗಸಭೆಯ (Global AYUSH Investment and Innovation Summit) ಉದ್ಘಾಟನಾ ಸಮಾರಂಭವನ್ನುದ್ದೇಶಿ ಮಾತನಾಡುತ್ತಿದ್ದ ಮೋದಿ, . ಆಯುಷ್- ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯನ್ನು ಸೂಚಿಸುತ್ತದೆ.

ಮುಂದಿನ ದಿನಗಳಲ್ಲಿ ಭಾರತವು ಆಯುಷ್ ಮಾರ್ಕ್ ಅನ್ನು ಪರಿಚಯಿಸಲಿದೆ. ಇದು ದೇಶದ ಗುಣಮಟ್ಟದ ಆಯುಷ್ ಉತ್ಪನ್ನಗಳಿಗೆ ಅಧಿಕೃತೆಯನ್ನು ನೀಡುತ್ತದೆ . ಇದು ವಿಶ್ವದ ಜನರು ಗುಣಮಟ್ಟದ ಆಯುಷ್ ಉತ್ಪನ್ನಗಳನ್ನು ಖರೀದಿಸುತ್ತಿದ್ದಾರೆ ಎಂಬ ವಿಶ್ವಾಸವನ್ನು ನೀಡುತ್ತದೆ ಎಂದು ಪ್ರಧಾನಿ ಹೇಳಿದರು.

ದೇಶವು ಆಯುಷ್ ಔಷಧಿಗಳು, ಪೂರಕಗಳು ಮತ್ತು ಸೌಂದರ್ಯವರ್ಧಕಗಳ ಉತ್ಪಾದನೆಯಲ್ಲಿ ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ. ಇದಕ್ಕೆ ಸೂಕ್ತ ಉದಾಹರಣೆ ಅಂದರೆ 2014ರ ಮೊದಲು ಆಯುಷ್ ವಲಯವು 3 ಬಿಲಿಯನ್ ಡಾಲರ್ ಗಿಂತ ಕಡಿಮೆಯಿತ್ತು, ಇಂದು ಅದು ಕೂಡ 18 ಬಿಲಿಯನ್ ಡಾಲರ್ ದಾಟಿದೆ ಎಂದು ಅವರು ಹೇಳಿದ್ದಾರೆ.

ಆಯುಷ್ ಶೃಂಗಸಭೆಯಲ್ಲಿ ಮಾರಿಷಸ್‌ನ ಪ್ರಧಾನ ಮಂತ್ರಿ ಪ್ರವಿಂದ್ ಕುಮಾರ್ ಜುಗ್ನೌತ್ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮಹಾನಿರ್ದೇಶಕ ಡಾ ಟೆಡ್ರೊಸ್ ಘೆಬ್ರೆಯೆಸಸ್ ಕೂಡ ಉಪಸ್ಥಿತರಿದ್ದರು.

Sneha Gowda

Recent Posts

‘ಜಂಟಿ ಸರ್ವೆ ಆಗುವ ತನಕ ಹಿರೀಕಾಟಿಯಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ’

ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…

17 seconds ago

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

7 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

14 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

26 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

31 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

46 mins ago