ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 36,401 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಕೊರೋನಾಗೆ ಕಳೆದ 24 ಗಂಟೆಗಳ ಅವಧಿಯಲ್ಲಿ 530 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 3,64,129 ಮಂದಿಯಿದ್ದು, ಕಳೆದ 149 ದಿನಗಳಲ್ಲಿ ಅತಿ ಕಡಿಮೆಯಾಗಿದೆ. ಇದುವರೆಗೆ 3,15,25,080 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ 24 ಗಂಟೆಗಳಲ್ಲಿ 39,157 ಮಂದಿ ಗುಣಮುಖರಾಗಿದ್ದರೆ, ಮೃತಪಟ್ಟವರ ಒಟ್ಟು ಸಂಖ್ಯೆ 4,33,049ಕ್ಕೇರಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ಐಸಿಎಂಆರ್) ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್), ಭಾರತದಲ್ಲಿ ಕೋವಿಡ್ -19 ಪರೀಕ್ಷೆಯಲ್ಲಿ ಅಗ್ರಸ್ಥಾನದಲ್ಲಿದೆ, ನಿನ್ನೆಯವರೆಗೆ ದೇಶದಲ್ಲಿ 50 ಕೋಟಿಗೂ ಅಧಿಕ ಪರೀಕ್ಷೆಗಳನ್ನು ನಡೆಸಿ ಮೈಲಿಗಲ್ಲನ್ನು ಸಾಧಿಸಿದೆ.