Categories: ದೇಶ

ಭಾರತದ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಅಧಿಕಾರ ಸ್ವೀಕರ

ಭಾರತದ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ವೇಳೆ ಅಡ್ಮಿರಲ್ ಹರಿ ಕುಮಾರ್ ತಮ್ಮ ತಾಯಿಯ ಪಾದ ಮುಟ್ಟಿ ನಮಸ್ಕರಿಸಿದ್ದು, ಭಾರತೀಯರ ಗಮನ ಸೆಳೆದಿದೆ.

ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಬಗ್ಗೆ ನೀವು ತಿಳಿಯಲೇಬೇಕಾದ ಅಂಶಗಳಿವು.

ಸಂಯೋಜಿತ ರಕ್ಷಣಾ ಸಿಬ್ಬಂದಿಗಳ ಪ್ರದಾನ ಕಚೇರಿಯ ಭಾಗವಾಗಿ ಥಿಯೇಟರ್ ಕಮಾಂಡ್ ಗಳನ್ನು ಪ್ರಾರಂಭಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.ಅಡ್ಮಿರಲ್ ಹರಿಕುಮಾರ್ ಅವರು ಸುದೀರ್ಘ 39 ವರ್ಷಗಳ ಕಾಲ ನೌಕಾಪಡೆಯ ವಿವಿಧ ಕಮಾಂಡ್, ಸ್ಟಾಫ್ ಮತ್ತು ನೇಮಕ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಐಎನ್‌ಎಸ್ ನಿಶಾಂಕ್, ಮಿಸೈಲ್ ಕಾರ್ವೆಟ್, ಐಎನ್‌ಎಸ್ ಕೋರಾ ಮತ್ತು ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ಐಎನ್‌ಎಸ್ ರಣವೀರ್ ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.ನೌಕಾಪಡೆಯ ವಿಮಾನವಾಹಕ ನೌಕೆ ಐಎನ್ ಎಸ್ ವಿರಾಟ್‌ಗೆ ಕಮಾಂಡರ್ ಆಗಿದ್ದರು.ಏ.12 1962ರಲ್ಲಿ ಆರ್. ಹರಿಕುಮಾರ್ ಜನಿಸಿದರು. ಜ.1 1983ರಲ್ಲಿ ನೌಕಾ ಪಡೆಗೆ ಸೇರ್ಪಡೆಗೊಂಡರು.

ವಿದ್ಯಾಭ್ಯಾಸ: ಯುಎಸ್ ನೇವಲ್ ವಾರ್ ಕಾಲೇಜ್, ಆರ್ಮಿ ವಾರ್ ಕಾಲೇಜ್, Mhow ಮತ್ತು ಯುಕೆಯ ರಾಯಲ್ ಕಾಲೇಜ್ ಆಫ್ ಡಿಫೆನ್ಸ್ ಸ್ಟಡೀಸ್‌ನಲ್ಲಿ ಅಧ್ಯಯನ ಮಾಡಿದ್ದಾರೆ.ಸಾಧನೆ: ಅಡ್ಮಿರಲ್ ಕುಮಾರ್ ಅವರಿಗೆ ಅತಿ ವಿಶಿಷ್ಟ ಸೇವಾ ಪದಕ (AVSM), ವಿಶಿಷ್ಟ ಸೇವಾ ಪದಕ (VSM) ಪಡೆದಿದ್ದಾರೆ. ನ.23 2021ರಂದು ರಾಷ್ಟ್ರಪತಿ ಕೋವಿಂದ್ ಅವರಿಂದ ಪರಮ ವಿಶಿಷ್ಟ ಸೇವಾ ಪದಕ (PVSM) ಪಡೆದಿದ್ದಾರೆ.

 

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago