ನವದೆಹಲಿ : ಇನ್ನು ಮುಂದೆ ಭಾರತದಲ್ಲಿರುವ ವಿದೇಶಿ ಪ್ರಜೆಗಳು ಕೋವಿಡ್ ಲಸಿಕೆ ಪಡೆಯಲು ಅರ್ಹರು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದೆ.
ಕೊರೋನಾ ಲಸಿಕೆ ಪಡೆಯುವ ಸಲುವಾಗಿ ವಿದೇಶಿಗರು ತಮ್ಮ ಪಾಸ್ಪೋರ್ಟ್ ಅನ್ನು ಗುರುತಿನ ದಾಖಲೆಯಾಗಿ ಕೋವಿನ್ ಪೋರ್ಟಲ್ನಲ್ಲಿ ನೋಂದಾಯಿಕೊಳ್ಳಲು ಬಳಸಬಹುದು ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಈ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡ ನಂತರ ವಿದೇಶಿ ಪ್ರಜೆಗಳಿಗೆ ಲಸಿಕೆಗಾಗಿ ಸ್ಲಾಟ್ ನೀಡಲಾಗುತ್ತದೆ . ಗಮನಾರ್ಹ ಸಂಖ್ಯೆಯ ವಿದೇಶಿ ಪ್ರಜೆಗಳು ಭಾರತದ ನಗರ ವಾಸಿಗಳಗಿರುತ್ತಾರೆ.
ಈ ಮಹಾನಗರಗಳಲ್ಲಿ ಹೆಚ್ಚಿನ ಜನಸಂಖ್ಯಾ ಸಾಂದ್ರತೆಯಿಂದಾಗಿ ಕೊರೋನಾ ಹರಡುವ ಸಾಧ್ಯತೆ ಹೆಚ್ಚಾಗಿದೆ. ಅಂತಹ ಯಾವುದೇ ಸಂಭವನೀಯತೆಯನ್ನು ಎದುರಿಸಲು, ಎಲ್ಲಾ ಅರ್ಹ ವ್ಯಕ್ತಿಗಳಿಗೆ ಲಸಿಕೆ ಹಾಕುವುದು ಮುಖ್ಯವಾಗಿದೆ ಎಂದು ಕೇಂದ್ರ ಹೇಳಿದೆ.