ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈನತಕ 41.69 ಕೋಟಿ ಡೋಸ್ ಕೋವಿಡ್ ತಡೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 2,74,37,108 ಡೋಸ್ ಕೋವಿಡ್ ತಡೆ ಲಸಿಕೆಗಳಿವೆ. ತ್ಯಾಜ್ಯಗಳು ಸೇರಿದಂತೆ ಒಟ್ಟು 38,94,87,442 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 18,16,140 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 39,96,95,879 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.