ಮುಂಬೈ: ಶನಿವಾರ ತಡರಾತ್ರಿ ಮುಂಬೈ ನಗರದಲ್ಲಿ ಸುರಿದ ಭಾರೀ ಮಳೆಗೆ ಚೆಂಬೂರಿನ ಭಾರತ್ ನಗರ ಪ್ರದೇಶದಲ್ಲಿ ಮನೆಯ ಗೋಡೆ ಕುಸಿದು 15ಮಂದಿ ಸಾವನ್ನಪ್ಪಿದ್ದಾರೆ.
ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಭಾರೀ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ, ಹಲವೆಡೆ ಭೂಕುಸಿತ ಸಂಭವಿಸಿದೆ. ಇನ್ನೂ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ.