ಬಿಕನೇರ್: ಟ್ರಕ್ ಹಾಗೂ ಕ್ರೂಸರ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿರುವ ಘಟನೆ ನಾಗೌರ್ನಲ್ಲಿ ಮಂಗಳವಾರ ನಡೆದಿದೆ.
ಈ ದುರ್ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಬಿಕನೇರ್ನ ನೋಖಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಗೌರ್ನ ಬಿಕನೇರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿರುವ ಅಪಘಾತದಲ್ಲಿ ಸ್ಥಳದಲ್ಲೇ 8 ಮಂದಿ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೂವರು ಅಸುನೀಗಿದರು.