ಮಣಿಪುರದ ಮುಖ್ಯಮಂತ್ರಿಯಾಗಿ ಎನ್. ಬಿರೇನ್ ಸಿಂಗ್ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಫಾಲ್ನಲ್ಲಿ ಇಂದು ಮಣಿಪುರ ಬಿಜೆಪಿ ರಾಜ್ಯ ಶಾಸಕಾಂಗ ಸಭೆ ನಡೆದಿದ್ದು, ಇದಾದ ಬಳಿಕ ಮಣಿಪುರದ ಹಂಗಾಮಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಕುರಿತು ಮಾತನಾಡಿದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಮಣಿಪುರದಲ್ಲಿ ಸ್ಥಿರ ಮತ್ತು ಜವಾಬ್ದಾರಿಯುತ ಸರ್ಕಾರವನ್ನು ಹೊಂದಿದೆ. ಏಕೆಂದರೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಕೇಂದ್ರವು ಈಶಾನ್ಯ ರಾಜ್ಯಗಳಿಗೆ ವಿಶೇಷ ಗಮನ ನೀಡುತ್ತಿದೆ ಎಂದು ಹೇಳಿದ್ದಾರೆ.
ಭಾನುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರು ಸಭೆಗಾಗಿ ಇಂಫಾಲ್ಗೆ ಆಗಮಿಸಿದರು. ಮಣಿಪುರದ ನಿಯೋಜಿತ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಬಿಜೆಪಿ ನಾಯಕ ಬಿಸ್ವಜಿತ್ ಸಿಂಗ್ ಅವರು ರಾಜ್ಯದ ಹೊಸದಾಗಿ ಚುನಾಯಿತರಾದ ಇತರ ಬಿಜೆಪಿ ಶಾಸಕರೊಂದಿಗೆ ಸಭೆಯಲ್ಲಿ ಉಪಸ್ಥಿತರಿದ್ದರು.
ಇತ್ತೀಚಿನ ಚುನಾವಣೆಯಲ್ಲಿ ಮಣಿಪುರದ 60 ಅಸೆಂಬ್ಲಿ ಸ್ಥಾನಗಳ ಪೈಕಿ 32 ಸ್ಥಾನಗಳಲ್ಲಿ ಬಿಜೆಪಿ ತನ್ನ ವಿಜಯವನ್ನು ದಾಖಲಿಸಿದೆ, ನಂತರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಏಳು ಸ್ಥಾನಗಳನ್ನು ಗೆದ್ದುಕೊಂಡಿತು, ಕಾಂಗ್ರೆಸ್ ಮತ್ತು ನಾಗಾ ಪೀಪಲ್ಸ್ ಫ್ರಂಟ್ ಐದು ಸ್ಥಾನಗಳನ್ನು ಗೆದ್ದುಕೊಂಡಿತು, ಕುಕಿ ಪೀಪಲ್ಸ್ ಅಲೈಯನ್ಸ್ ಎರಡು ಸ್ಥಾನಗಳನ್ನು ಗಳಿಸಿತು.
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…
ಇಂದು (ಭಾನುವಾರ) ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…