ಮತ್ತೆ ಗಲ್ವಾನ್‌ ಸಂಘರ್ಷದ ವಿಚಾರ ಕೆದಕಿದ ಚೀನಾಕ್ಕೆ ಭಾರತದ ಪ್ರತ್ಯುತ್ತರ

ಚೀನಾ:ಚೀನಾದ ಆತುರದ ನಡೆಯಿಂದ ದ್ವಿಪಕ್ಷೀಯ ಸಂಬಂಧಕ್ಕೆ ಭಾರಿ ಪೆಟ್ಟು ಬಿದ್ದಿದೆ. ಶಾಂತಿ ಸ್ಥಾಪನೆಗೆ ಚೀನಾ ವಿದೇಶಾಂಗ ಸಚಿವಾಲಯವು ತುರ್ತು ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ” ಎಂದು ಚೀನಾದ ಆರೋಪಕ್ಕೆ ಪ್ರತ್ಯುತ್ತರ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಹೇಳದ್ದಾರೆ.ಎಲ್‌ಎಸಿಯಲ್ಲಿ ಶಾಂತಿ ಮತ್ತು ನೆಮ್ಮದಿ ಕಾಪಾಡುವ ಸಹಕಾರಕ್ಕೆ ಚೀನಾ ಮತ್ತು ಭಾರತ ಸರಣಿ ಒಪ್ಪಂದಗಳಿಗೆ ಸಹಿ ಹಾಕಿವೆ. ಈ ಒಪ್ಪಂದಗಳು ಗಡಿ ಪ್ರದೇಶದಲ್ಲಿ ಸ್ಥಿರತೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಲಿಜಿಯಾನ್ ಹೇಳಿದ್ದರು.”ನಾವು ಅಂತಹ ಹೇಳಿಕೆಗಳನ್ನು ತಿರಸ್ಕರಿಸುತ್ತೇವೆ. ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯಲ್ಲಿ ಕಳೆದ ವರ್ಷ ಉಂಟಾದ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟ ಹಾಗೂ ಸ್ಥಿರವಾಗಿತ್ತು” ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.2020ರ ಜೂ.15 ರಂದು ಚೀನಾ-ಇಂಡಿಯಾ ಗಡಿಯಲ್ಲಿನ ಪೂರ್ವ ಲಡಾಕ್‌ ಬಳಿ ಗಲ್ವಾನ್‌ ಕಣಿವೆ ಪ್ರದೇಶಕ್ಕೆ ಚೀನಾದ ಪೀಪಲ್ಸ್‌ ಲಿಬರೇಷನ್‌ ಆರ್ಮಿ (ಪಿಎಲ್‌ಎ) ಸೈನಿಕರು ಏಕಾಏಕಿ ನುಗ್ಗಿದ್ದರು. ಅಲ್ಲದೇ, ಕಬ್ಬಿಣದ ತಂತಿಗಳನ್ನು ಸುತ್ತಿದ ಬಡಿಗೆಗಳಿಂದ ಭಾರತದ ಐಟಿಬಿಪಿ ಯೋಧರ ಮೇಲೆ ಮಾರಣಾಂತಿಕ ಹಲ್ಲೆನಡೆಸಿದ್ದರು. ಒಟ್ಟು 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಪ್ರತಿರೋಧ ಒಡ್ಡುವ ಮೂಲಕ ಚೀನಾ ಸೈನಿಕರು ಹಿಮ್ಮೆಟ್ಟಿಸುವಲ್ಲಿಯಶಸ್ವಿಯಾಗಿದ್ದ ಯೋಧರು, 25 ಮಂದಿ ಚೀನಾ ಸೈನಿಕರನ್ನು ಕೂಡ ಹತ್ಯೆಗೈದಿದ್ದರು. ಹಲವು ಸುತ್ತಿನ ಸಂಧಾನ ಸಭೆಗಳು ನಡೆದಿದ್ದರೂ, ಕಳೆದ 16 ತಿಂಗಳಿಂದ ಈ ಗಡಿ ಸಂಘರ್ಷವು ಬೂದಿ ಮುಚ್ಚಿದ ಕೆಂಡದಂತೆಯೇ ಉಳಿದುಕೊಂಡಿದೆ.

Swathi MG

Recent Posts

ಜಾಗದ ತಕರಾರು: ನಗರಸಭಾ ಸದಸ್ಯನಿಂದ ದಂಪತಿ ಮೇಲೆ ಹಲ್ಲೆ, ಜೀವಬೆದರಿಕೆ

ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…

5 mins ago

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

17 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

20 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

26 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

32 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

45 mins ago