ನವದೆಹಲಿ: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಗುರುವಾರ ಮತ್ತೆ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿವೆ.
ಗುರುವಾರ ಬೆಲೆ ಸರಾಸರಿ 37 ಪೈಸೆ ಪ್ರತಿ ಲೀಟರ್ ಏರಿಕೆ, ಡೀಸೆಲ್ ಬೆಲೆ 10 ಪೈಸೆ ಪ್ರತಿ ಲೀಟರ್ ನಂತೆ ಏರಿಕೆಯಾಗಿದೆ. ಮೇ 4ರಿಂದ ಇಂದಿನ ತನಕ ಒಟ್ಟು 37 ಬಾರಿ ಹಾಗೂ ಜೂನ್ ತಿಂಗಳಲ್ಲೇ 18 ಬಾರಿ ಬೆಲೆ ಏರಿಕೆ ಮಾಡಲಾಗಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ ರೂ.106.65 ಪ್ರತಿ ಲೀಟರ್, ಡೀಸೆಲ್ ರೂ.97.24 ಪ್ರತಿ ಲೀಟರ್ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 103.99ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 95.05 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 100.62ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 89.68 ರೂ ಗೆ ಏರಿಕೆಯಾಗಿದೆ.