News Karnataka Kannada
Monday, April 29 2024
ದೇಶ

ಮತ್ತೆ ಮೂವರು ಆಲ್‌ ಖೆದಾ ಉಗ್ರರು ಪೋಲೀಸ್‌ ಬಲೆಗೆ

Arres Terrorist 12072021
Photo Credit :

ಲಖನೌ: ಅಲ್‌ ಖೈದಾ ಉಗ್ರ ಸಂಘಟನೆಯ ಮೂವರು ಶಂಕಿತ ಉಗ್ರರನ್ನು ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ಪಡೆ ಬುಧವಾರ ಬಂಧಿಸಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.ಇವರು ಆಲ್‌ ಖೆದಾ ಕಾಶ್ಮೀರ ಘಟಕದೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.
ಜುಲೈ 11ರಂದು ಲಖನೌನಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿತ್ತು. ಅವರ ವಿಚಾರಣೆ ನಡೆಸುವ ವೇಳೆ ಈ ಮೂವರ ಹೆಸರು ಬೆಳಕಿಗೆ ಬಂದಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ. ಇಂದು ಬಂಧಿತರಾದ ಮೂವರೂ ಲಖನೌ ನಿವಾಸಿಗಳು ಎಂದು ಭಯೋತ್ಪಾದನೆ ನಿಗ್ರಹ ಪಡೆ ತಿಳಿಸಿದೆ. ‘ಉತ್ತರ ಪ್ರದೇಶದಲ್ಲಿ ಸಕ್ರಿಯವಾಗಿದ್ದ ಅಲ್‌ ಖೈದಾ ಉಗ್ರ ಸಂಘಟನೆಯ ಘಟಕವೊಂದನ್ನು ಪತ್ತೆ ಮಾಡಿದ್ದೇವೆ. ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದೇವೆ. ಅವರಿಂದ ಭಾರಿ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ’ ಎಂದು ಉತ್ತರ ಪ್ರದೇಶ ಭಯೋತ್ಪಾದನೆ ನಿಗ್ರಹ ಪಡೆ ಭಾನುವಾರ ಹೇಳಿತ್ತು. ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದರು. ಬಂಧಿತರನ್ನು ಮಿನಾಜ್ ಅಹ್ಮದ್ ಮತ್ತು ಮುಶ್ರುದ್ದೀನ್ ಅಲಿಯಾಸ್ ಮುಶೀರ್ ಎಂದು ಗುರುತಿಸಲಾಗಿತ್ತು.‘ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ರಾಜ್ಯದ ರಾಜಧಾನಿಯ ಜನನಿಬಿಡ ಪ್ರದೇಶದಲ್ಲಿ ಸ್ಫೋಟ ನಡೆಸಲು ಇವರು ಸಂಚು ರೂಪಿಸಿದ್ದರು. ಇವರ ಜತೆಗಾರರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದೇವೆ. ಮತ್ತಷ್ಟು ಶಂಕಿತರನ್ನು ಬಂಧಿಸಲು ಬೇರೆ ಬೇರೆ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ’ ಎಂದು ಕುಮಾರ್ ಅವರು ತಿಳಿಸಿದ್ದರು.
‘ಲಖನೌನ ಹೊರವಲಯದಲ್ಲಿ ಇರುವ ಕಾಕೋರಿ ಪ್ರದೇಶದ ಮನೆಯೊಂದರಲ್ಲಿ ಶಂಕಿತ ಉಗ್ರರು ಅಡಗಿದ್ದರು. ನಿಖರ ಮಾಹಿತಿ ಮೇರೆಗೆ ಅಲ್ಲಿ ಶೋಧ ಕಾರ್ಯ ನಡೆಸಲಾಯಿತು. ಇವರಿಬ್ಬರು ಸಿಕ್ಕಿಬಿದ್ದರು. ಬಂಧಿತ ಮಿನಾಜ್ ಮತ್ತು ಮುಶೀರ್ ಅವರಿಗೆ ಪಾಕಿಸ್ತಾನದಿಂದ ನಿರ್ದೇಶನಗಳು ಬರುತ್ತಿದ್ದವು’ ಎಂದು ಕುಮಾರ್ ಹೇಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು